Advertisement

ಬಂಟ್ವಾಳ : ಅಪರಿಚಿತ ವಾಹನ ಢಿಕ್ಕಿ ಹೊಡೆದು ಪಲ್ಟಿಯಾದ ರಿಕ್ಷಾ: ಚಾಲಕ ಸೇರಿ ಇಬ್ಬರಿಗೆ ಗಾಯ

08:25 PM Dec 05, 2022 | Team Udayavani |

ಬಂಟ್ವಾಳ: ರಾ.ಹೆ.75ರ ತುಂಬೆಯಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ಆಟೋವೊಂದಕ್ಕೆ ಸೋಮವಾರ ಬೆಳಗ್ಗೆ ಯಾವುದೋ ವಾಹನವೊಂದು ಢಿಕ್ಕಿಯಾಗಿ ಪರಾರಿಯಾಗಿದ್ದು, ಘಟನೆಯಲ್ಲಿ ಆಟೋ ಪಲ್ಟಿಯಾಗಿ ಚಾಲಕ ಸೇರಿದಂತೆ ಇಬ್ಬರು ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

Advertisement

ಘಟನೆಯಲ್ಲಿ ಆಟೋ ಚಾಲಕ ಮೂಡನಡುಗೋಡು ಗ್ರಾಮದ ದಡ್ಡಲಕಾಡು ನಿವಾಸಿ ಪುರುಷೋತ್ತಮ ಗಂಭೀರ ಗಾಯಗೊಂಡಿದ್ದು, ಆಟೋದಲ್ಲಿದ್ದ ಪ್ರಯಾಣಿಕರೊಬ್ಬರಿಗೂ ಗಾಯವಾಗಿದೆ. ಪುರುಷೋತ್ತಮ ಅವರು ಆಟೋದಲ್ಲಿ ಬಿ.ಸಿ.ರೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಯಾವುದೋ ವಾಹನ ಢಿಕ್ಕಿ ಹೊಡೆದು ಆಟೋ ಪಲ್ಟಿಯಾಗಿದೆ.

ಬಳಿಕ ಢಿಕ್ಕಿ ಹೊಡೆದ ವಾಹನವನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮುಸ್ಲಿಂ ಓಲೈಕೆಗಾಗಿ ಪ್ರತ್ಯೇಕ ಕಾಲೇಜು ಘೋಷಣೆ: ಸರ್ಕಾರದ ನಿರ್ಧಾರಕ್ಕೆ ಮುತಾಲಿಕ್ ಖಂಡನೆ

Advertisement

Udayavani is now on Telegram. Click here to join our channel and stay updated with the latest news.

Next