Advertisement
ಬಂಟ್ವಾಳ ಎಸ್‌ವಿಎಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿಯ ವಿದ್ಯಾರ್ಥಿನಿ ಅನುಪಮಾ ಕಾಮತ್ 624 ಮತ್ತು ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ ವಿಟ್ಲದ ಚಿನ್ನಯಿ 624 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಬಂಟ್ವಾಳ ತಾಲೂಕಿನ ಒಟ್ಟು 88 ಪ್ರೌಢ ಶಾಲೆಗಳಲ್ಲಿ ಶಾಲೆಗಳಲ್ಲಿ 21 ಶಾಲೆಗಳು ಶೇ. 100 ಫಲಿತಾಂಶ ಪಡೆಯುವ ಮೂಲಕ ಸಾಧನೆ ಮಾಡಿದೆ. ಅನುತ್ತೀರ್ಣ ವಿದ್ಯಾರ್ಥಿಗಳು ಧೃತಿಗೆಡಬಾರದು
ಅನುತ್ತೀರ್ಣರಾದ ವಿದ್ಯಾರ್ಥಿಗಳು ಧೃತಿಗೆಡಬಾರದು. ಜೂನ್ ಲ್ಲಿ ಪೂರಕ ಪರೀಕ್ಷೆ ನಡೆಯಲಿದೆ. ಅಂಕ ಕಡಿಮೆ ಬಂದಿದ್ದವರು ಫಲಿತಾಂಶದ ಯಥಾ ಪ್ರತಿ ಪಡೆದು ಮರು ಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಮುಂದಿನ ಶೈಕ್ಷಣಿಕ ವರ್ಷಕ್ಕೇ ಸೇರ್ಪಡೆಗೆ ಅವಕಾಶ ಇರುವುದರಿಂದ ಫಲಿತಾಂಶದಲ್ಲಿ ವ್ಯತ್ಯಾಸ ಕಂಡಾಗ ಗೊಂದಲಕ್ಕೆ ಈಡಾಗಬಾರದು. ಹೆತ್ತವರು ಮಕ್ಕಳ ಬಗ್ಗೆ ನಿಗಾ ವಹಿಸಬೇಕು. ಮಾಹಿತಿಗಾಗಿ ಶಾಲೆಯನ್ನು ಸಂಪರ್ಕಿಸಬೇಕು.
ಎನ್. ಶಿವಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ, ಬಂಟ್ವಾಳ