Advertisement

Bantwal ಚೂರಿ ಇರಿತ ಪ್ರಕರಣ: ಆರೋಪಿಯ ಸೆರೆ

10:01 PM Apr 17, 2024 | Team Udayavani |

ಬಂಟ್ವಾಳ: ಬಂಟ್ವಾಳ ಬಡ್ಡಕಟೆxಯಲ್ಲಿ ವ್ಯಕ್ತಿಯೋರ್ವರಿಗೆ ಚೂರಿ ಇರಿದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ರವಿ ನಾವೂರು ಬಂಧಿತ ಆರೋಪಿ. ಆತ ಎ. 14ರ ರಾತ್ರಿ ಜಕ್ರಿಬೆಟ್ಟು ನಿವಾಸಿ ಪುಷ್ಪರಾಜ್‌ ಅವರ ಕುತ್ತಿಗೆಯ ಭಾಗಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದ. ಗಂಭೀರ ಗಾಯಗೊಂಡಿದ್ದ ಪುಷ್ಪರಾಜ್‌ ಅವರು ಪ್ರಸ್ತುತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿಯು ಕೃತ್ಯ ನಡೆಸಿದ ಬಳಿಕ ಮೊಬೈಲ್‌ ಸ್ವಿಚ್ ಆಫ್‌ ಮಾಡಿ ಪರಾರಿಯಾಗಿದ್ದ. ಇವರಿಬ್ಬರ ಮಧ್ಯೆ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಗಲಭೆ ನಡೆದಿತ್ತು ಎಂದು ಗುರುರಾಜ್‌ ಅವರು ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ಆರೋಪಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next