Advertisement
ಈ ಹಿಂದೆ ನಿಷೇಧಾಜ್ಞೆ ಇದ್ದರೂ ಬೆಳಗ್ಗಿನ ಹೊತ್ತು ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿತ್ತು. ಹೀಗಾಗಿ ಮಧ್ಯಾಹ್ನ 12 ಗಂಟೆಯವರೆಗೆ ತಾಲೂಕಿನ ಪೇಟೆ ಪ್ರದೇಶಗಳಲ್ಲಿ ಚಟುವಟಿಕೆ ಕಂಡುಬರುತ್ತಿತ್ತು. ಆದರೆ ಶುಕ್ರವಾರ ರಾತ್ರಿ ಜಿಲ್ಲಾಡಳಿತ ಸಂಪೂರ್ಣ ಬಂದ್ ಆದೇಶಿಸಿದ್ದರಿಂದ ಬಳಿಕ ಸಂಪೂರ್ಣ ಸ್ತಬ್ಧಗೊಂಡಿತ್ತು.
ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಬೆಳ್ಳಂಬೆಳಗ್ಗೆಯೇ ಪೊಲೀಸರು ರಸ್ತೆಗಿಳಿದು ಜನತೆ ಮನೆಯಿಂದ ಹೊರ ಬಾರದಂತೆ ಎಚ್ಚರಿಕೆ ವಹಿಸಿದ್ದರು. ಸ್ಥಳೀಯ ಪೊಲೀಸರ ಜತೆಗೆ ರಾಜ್ಯ ಮೀಸಲು ಪೊಲೀಸರನ್ನೂ ನಿಯೋಜಿಸಲಾಗಿತ್ತು. ಸಜಿಪನಡು: ಕಟ್ಟೆಚ್ಚರ
ತಾಲೂಕಿನ ಸಜಿಪನಡು ಗ್ರಾಮದ 10 ತಿಂಗಳ ಮಗುವಿಗೆ ಕೋವಿಡ್ 19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಡೀ ಗ್ರಾಮವನ್ನೇ ಹೋಮ್ ಕ್ವಾರಂಟೈನ್ ನಲ್ಲಿಡಲಾಗಿದೆ. ಗುರುವಾರ ಸಂಜೆಯಿಂದಲೇ ಗ್ರಾಮದ ಸಂಪರ್ಕ ರಸ್ತೆಗಳನ್ನು ಬಂದ್ ಮಾಡಲಾಗಿದ್ದು, ಶನಿವಾರ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿತ್ತು.