Advertisement
ಅವರು ಡಿ. 4ರಂದು ತಾ.ಪಂ. ಸಭಾಂಗಣದಲ್ಲಿ ನಡೆದ ಜಮಾಬಂದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿವರ ನೀಡಿದರು. ಅಧಿಭಾರ ಶುಲ್ಕದ 32.82 ಲಕ್ಷ ರೂ. ಅನುದಾನದಲ್ಲಿ 22 ಕಾಮಗಾರಿ ಕೈಗೆತ್ತಿಕೊಂಡು 13 ಪೂರ್ಣಗೊಂಡಿವೆ. ಇದಕ್ಕೆ 23.71 ಲಕ್ಷ ರೂ. ಖರ್ಚು ಮಾಡಿದೆ. ಬಾಡಿಗೆ ಬಡ್ಡಿ ಹಣ 9.70 ಲಕ್ಷ ರೂ. ಅನುದಾನದಲ್ಲಿ ಎರಡು ಕಾಮಗಾರಿಗಳನ್ನು ಮಾಡಿದೆ. ಸೇರ್ಪಡೆ – ಮಾರ್ಪಾಡು ಅನುದಾನ 8.98 ಲಕ್ಷ ರೂ. ಬಿಡುಗಡೆಯಾಗಿದ್ದು, ಅದರಲ್ಲಿ 8.90 ಖರ್ಚು ಮಾಡಿ 18 ಕಾಮಗಾರಿ ಮುಕ್ತಾಯ ಆಗಿದೆ ಎಂದರು.
Related Articles
ಈ ಸಂದರ್ಭ ಮಾತನಾಡಿದ ಅವರು, ಗ್ರಾಮಸಭೆಗಳಲ್ಲಿ ಇಲಾಖೆ ಅಧಿಕಾರಿಗಳು ಸರಕಾರದ ಯೋಜನೆಯ ಬಗ್ಗೆ ಗ್ರಾಮಸ್ಥರಿಗೆ ಸ್ಪಷ್ಟವಾದ ಮಾಹಿತಿ ನೀಡಬೇಕು. ಅಲ್ಲದೆ, ಗ್ರಾ.ಪಂ.ಗಳಲ್ಲಿ ಯೋಜನೆಯ ಬಗ್ಗೆ ಕರಪತ್ರವನ್ನು ಫಲಕಗಳಲ್ಲಿ ಅಳವಡಿಸಿದರೆ ಉತ್ತಮ. ನರೇಗ ಯೋಜನೆಯಲ್ಲಿ ಶಾಲಾ ಆವರಣದಲ್ಲಿ ಕೈತೋಟ ಹಾಗೂ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಲು ಮುತುವರ್ಜಿ ವಹಿಸಬೇಕು ಎಂದರು.
Advertisement
ಸದಸ್ಯರು, ಅಧಿಕಾರಿಗಳ ಸಹಕಾರತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ, ತಾ.ಪಂ. ವ್ಯಾಪ್ತಿಯ ಎಲ್ಲ ಕಾಮಗಾರಿಗಳು ತಾ.ಪಂ. ಸದಸ್ಯ ಹಾಗೂ ಅಧಿಕಾರಿಗಳ ಸಹಕಾರದಿಂದ ಪೂರ್ಣಗೊಳಿಸಲು ಸಾಧ್ಯವಾಗಿದೆ. ಕೆಲವೊಂದು ಸಮಸ್ಯೆಗಳು ಎದುರಾದಾಗ ಅದನ್ನು ಮಾತುಕತೆಯ ಮೂಲಕ ಬಗೆಹರಿಸುವ ಕಾರ್ಯ ಮಾಡಲಾಗಿದೆ ಎಂದರು. ವಿಶೇಷಚೇತನ ಮಕ್ಕಳು ಶಿಕ್ಷಣದಿಂದ ವಂಚಿತ
ತಾಲೂಕಿನ ವಿಶೇಷಚೇತನ ಮಕ್ಕಳನ್ನು ಗುರುತಿಸುವ ಕೆಲಸವಾಗುತ್ತಿಲ್ಲ. ಅದಲ್ಲದೆ ಕೆಲವು ವಿಶೇಷ ಚೇತನ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದು, ಈ ಬಗ್ಗೆ ಇಲಾಖೆ ಯಾವುದೇ ಮುತುವರ್ಜಿ ವಹಿಸಿದಂತೆ ಕಾಣುತ್ತಿಲ್ಲ. ಕೆಲವು ಖಾಸಗಿ ಶಾಲೆಯಲ್ಲಿ ಪ್ರವೇಶ ಶುಲ್ಕ ವಿಧಿಸಲಾಗುತ್ತಿದೆ ಎಂದು ತಾ.ಪಂ. ಸದಸ್ಯ ಹೈದರ್ ಕೈರಂಗಳ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ, ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿಶೇಷ ಮಕ್ಕಳಿಗೆ ಶಿಕ್ಷಣ ಉಚಿತವಾಗಿದ್ದು, ಖಾಸಗಿ ಶಾಲೆಗಳ ಬಗ್ಗೆ ಮಾಹಿತಿ ಕಲೆಹಾಕಲಾಗುವುದು ಎಂದರು. ಜಿ.ಪಂ. ಸಿಇಒ ಪ್ರತಿಕ್ರಿಯಿಸಿ, ನಿಯಮ ಪಾಲನೆಯಾಗದ ಶಾಲೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಲ್ಲದೆ, ವಿಶೇಷಚೇತನ ಮಕ್ಕಳಿಗಾಗಿ ತಾಲೂಕು ಮಟ್ಟದಲ್ಲಿ ಶಿಬಿರವನ್ನು ಏರ್ಪಡಿಸುವಂತೆ ಸಲಹೆ ನೀಡಿದರು. ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯ ಆಶ್ರಯದಲ್ಲಿ ವಿಶೇಷಚೇತನ ಮಕ್ಕಳ ಸರ್ವೆ ಕಾರ್ಯ ಕೈಗೊಂಡಿದ್ದು, ಅವರಿಗೆ ಬೇಕಾದ ಸಲಕರಣೆಗಳನ್ನು ಪಟ್ಟಿ ಮಾಡಿ ತಾ.ಪಂ.ಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ತಾ.ಪಂ. ಉಪಾಧ್ಯಕ್ಷ ಅಬ್ಟಾಸ್ ಅಲಿ, ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ ಉಪಸ್ಥಿತರಿದ್ದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿ, ವಂದಿಸಿದರು. ಅನುದಾನ ಬೆಳ್ತಂಗಡಿಗೆ
ತಾ|ನ ಶಿಕ್ಷಣ, ಸಿಡಿಪಿಒ ಹಾಗೂ ಪಶುಸಂಗೋಪನೆ ಇಲಾಖೆಗೆ ಸಂಬಂಧಿಸಿದ ಅನುದಾನ ಮತ್ತು ವೇತನ ತಾಂತ್ರಿಕ ಸಮಸ್ಯೆಯಿಂದ ಬೆಳ್ತಂಗಡಿಗೆ ವರ್ಗಾವಣೆ ಯಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶಿವಪ್ರಕಾಶ್ ತಿಳಿಸಿದರು. ಎಂ.ಬಿ. ನಾಯಕ್ ಪ್ರತಿಕ್ರಿಯಿಸಿ, ಉಭಯ ತಾ|ಗಳ ಪ್ರಾರಂಭ ಅಕ್ಷರ ‘ಬಿ’ ಆದ ಕಾರಣದಿಂದ ತಾಂತ್ರಿಕ ಸಮಸ್ಯೆ ಉಂಟಾಗಿದೆ. ಈ ಕುರಿತು ಜಿ.ಪಂ. ಸಿಇಒ ಹಣಕಾಸು ಇಲಾಖೆಗೆ ಖುದ್ದಾಗಿ ತೆರಳಿ ಮನವರಿಕೆ ಮಾಡಿಕೊಟ್ಟಿದ್ದಾರೆ. ಮುಂದೆ ಈ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.