Advertisement
ಪುದು ಗ್ರಾಮದ ಕೋಡಿಮಜಲು ನಿವಾಸಿಯಾಗಿರುವ ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಮನೆಯ ಕಪಾಟಿನೊಳಗೆ ಇರಿಸಲಾಗಿದ್ದ ಲಕ್ಷಾಂತರ ಬೆಲೆ ಬಾಳುವ ಚಿನ್ನಾಭರಣ ಸಹಿತ ಲಕ್ಷಾಂತರ ರೂ ಹಣವನ್ನು ಮನೆಯ ಕೆಲಸದಾತನೇ ಕದ್ದುಕೊಂಡು ಹೋಗಿರುವುದಾಗಿ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
Related Articles
Advertisement
ಕೆಲಸದ ಒತ್ತಡದ ನಡುವೆಯ ಅ. 23 ರಂದು ಊರಿಗೆ ವಾಪಾಸಾದ ಇವರು ರಾತ್ರಿ ಸುಮಾರು 8 ಗಂಟೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಹಾಕಿಕೊಂಡಿತ್ತು. ಕೀ ಕೊಡುವಂತೆ ಆತನಿಗೆ ಪೋನ್ ಮಾಡಿದಾಗ ಆಗಲೂ ಆಫ್ ಆಗಿತ್ತು. ಸಂಶಯದಿಂದ ಮನೆಯ ಹಿಂಬದಿಯಿಂದ ಕಿಟಕಿಯಲ್ಲಿ ಇಣುಕಿ ನೋಡಿದಾಗ ಕೋಣೆಯ ಬಾಗಿಲು ತೆರದುಕೊಂಡಿದ್ದು, ಕಪಾಟಿನ ಲಾಕರ್ ಮುರಿದು ಅದರಲ್ಲಿ ಇದ್ದ ಸೊತ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿತ್ತು.
ಕೂಡಲೇ ಗ್ರಾಮಾಂತರ ಪೋಲಿಸರಿಗೆ ದೂರು ನೀಡಿ, ಪೋಲೀಸ್ ಸಮಕ್ಷಮದಲ್ಲಿ ಮನೆಯ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ಮೊಹಮ್ಮದ್ ಅವರು ಕಪಾಟಿನಲ್ಲಿರಿಸಲಾಗಿದ್ದ ರೂ. 25 ಲಕ್ಷ ಹಾಗೂ ಅವರ ತಂದೆಯ ಕಪಾಟಿನಲ್ಲಿರಿಸಲಾಗಿದ್ದ ರೂ 25 ಲಕ್ಷ ಹಾಗೂ ರೂ. 496,000 ಲಕ್ಷ ಮೌಲ್ಯದ 24 ಗ್ರಾಂ ತೂಕದ ಬ್ರಾಸ್ ಲೈಟ್, 16 ಗ್ರಾಂ ತೂಕದ ಎರಡು ಚಿನ್ನದ ಉಂಗುರ, 40 ಗ್ರಾಂ ತೂಕದ ಚಿನ್ನದ ಬಲೆಗಳು, 8 ಗ್ರಾಂ ತೂಕದ ಚಿನ್ನದ ಬೆಂಡೋಲೆ, 32 ಗ್ರಾಂ.ತೂಕದ ಚಿನ್ನದ ಮಾಲೆ, 4 ಗ್ರಾಂ ತೂಕದ ಚಿನ್ನದ ಸರ ಕಳವು ಮಾಡಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಹಾಗೂ ಬೆರಳಚ್ಚು ತಜ್ಞರು,ಶ್ವಾನದಳದವರು ಆಗಮಿಸಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.