Advertisement

Bantwal; ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು

02:50 PM Mar 11, 2024 | Team Udayavani |

ಬಂಟ್ವಾಳ: ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾ.11 ರಂದು ಸೋಮವಾರ ಬೆಳಿಗ್ಗೆ ನಡೆದಿದೆ. ಮೆಲ್ಕಾರ್ ನಿವಾಸಿ ಉದಯ (36) ಮೃತಪಟ್ಟ ಯುವಕ.

Advertisement

ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದ ಯುವಕ ಉದಯ ಅವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಜನಸ್ನೇಹಿಯಾಗಿ, ಜನಸೇವಕನಾಗಿದ್ದ ಉದಯ ಅವರು ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು.

ಇಂದು ಬೆಳಿಗ್ಗೆ ಉದಯ ಏಳದೇ ಇದ್ದಾಗ ಮನೆಯವರು ಎಚ್ಚರಿಸಿದಾಗ ಯಾವುದೇ ಪ್ರತಿಕ್ರಿಯೆ ಇಲ್ಲದಿರುವುದು ಗಮನಿಸಿ, ಆಸ್ಪತ್ರೆಗೆ ತರಲಾಗಿದೆ. ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ ಆತ ಹೃದಯಾಘಾತದಿಂದ ನಿಧನರಾಗಿರುವ ಬಗ್ಗೆ ತಿಳಿಸಿದ್ದಾರೆ.

ಆಸ್ಪತ್ರೆಗೆ ಬಂಟ್ವಾಳ ನಗರ ಠಾಣಾ ಪೋಲೀಸರು ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next