Advertisement
ಮೈಸೂರು ಮೂಲದ ಕೃಷ್ಣ ಅರಸ ಎಂಬವರ ಕಾರಿಗೆ ಕೆ.ಎನ್.ಆರ್.ಸಿ.ಕಂಪೆನಿಯ ಲಾರಿ ಡಿಕ್ಕಿಯಾಗಿದೆ.
Related Articles
Advertisement
ಬಿಸಿರೋಡನಿಂದ ಅಡ್ಡಹೊಳೆವರೆಗೆ ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಯವರು ಕಾಮಗಾರಿ ನಡೆಸಲು ಜಲ್ಲಿಯನ್ನು ಕುಪ್ಪೆಪದವು ಎಂಬಲ್ಲಿರುವ ಜಲ್ಲಿ ಪ್ಲ್ಯಾಂಟ್ ನಿಂದ ಬೃಹತ್ ಗಾತ್ರದ ಲಾರಿಗಳ ಮೂಲಕ ತರುತ್ತಾರೆ. ಆದರೆ ಕಂಪೆನಿಯ ಲಾರಿಯ ಚಾಲಕರು ಎ.ಸಿ ಹಾಕಿಕೊಂಡು ಕಿವಿಗೊಂದು ಇಯರ್ ಪೋನ್ ಸಿಕ್ಕಿಸಿ ಹಾಡು ಕೇಳಿಕೊಂಡು ಅಥವಾ ಮೊಬೈಲ್ ನಲ್ಲಿ ಹರಟೆ ಹೊಡೆಯುತ್ತಾ ರಸ್ತೆಯಲ್ಲಿ ಬರುವ ಇತರ ವಾಹನಗಳ ಬಗ್ಗೆ ಗಮನವಿಲ್ಲದೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬರುತ್ತಾರೆ ಎಂಬುದು ಸ್ಥಳೀಯರ ವಾದ. ಹಾಗಾಗಿ ಕಳೆದ ಎರಡು ವರ್ಷಗಳಿಂದ ಕಂಪೆನಿಯ ಲಾರಿಗಳು ಡಿಕ್ಕಿಯಾಗಿ ಅನೇಕರಿಗೆ ಗಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಂಪೆನಿಯ ಘನಗಾತ್ರದ ವಾಹನಗಳ ಸಂಚಾರದಿಂದ ಪ್ರಾಣಹಾನಿಯ ಜೊತೆಗೆ ಉತ್ತಮವಾಗಿದ್ದ ಡಾಮರು ರಸ್ತೆಯಲ್ಲಿ ಅಲ್ಲಲ್ಲಿ ಹೊಂಡಗಳು ಬಿದ್ದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂದು ಅಪಘಾತ ನಡೆದ ಜಾಗದಲ್ಲಿ ಶಾಲೆಯಿದ್ದು, ಮಕ್ಕಳು ಶಾಲೆಗೆ ಬರುವ ಸಮಯದಲ್ಲಿ ಅತೀ ವೇಗ ಮತ್ತು ಅಜಾಗರೂಕತೆಯ ಚಾಲನೆ ಮಾಡಿದರೆ ಅನಾಹುತಗಳು ನಡೆಯಬಹುದು ಎಂದು ಇಲ್ಲಿ ಸೇರಿದ ಜನರು ಅರೋಪ ಮಾಡಿದ್ದಾರೆ. ಕಂಪನಿ ವಿರುದ್ದ ಪ್ರಕರಣ ದಾಖಲಿಸಿ ಮತ್ತು ಕಂಪನಿ ಲಾರಿಗಳಿಗೆ ಸ್ಪೀಡ್ ಕಂಟ್ರೋಲ್ ಕಿಟ್ ಹಾಕಿ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕೆಲ ಹೊತ್ತು ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಕಂಪನಿ ಮತ್ತು ಲಾರಿ ಚಾಲಕರ ವಿರುದ್ದ ಸಾರ್ವಜನಿಕರು ರೊಚ್ಚಿಗೆದ್ದ ಘಟನೆ ನಡೆಯಿತು. ಆ ಮಾರ್ಗದಲ್ಲಿ ಬರುವ ಕಂಪೆನಿಯ ಎಲ್ಲಾ ಲಾರಿಗಳನನ್ನು ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು. ಘಟನೆಯಿಂದ ಸ್ಥಳದಲ್ಲಿ ಜಮಾಯಿಸಿದ್ದ ಜನರನ್ನು ಪೋಲಿಸರು ಚದುರಿಸಿದರು.
ಸ್ಥಳಕ್ಕೆ ಟ್ರಾಫಿಕ್ ಎಸ್.ಐ. ಸುತೇಶ್, ಮತ್ತು ಸಂಜೀವ ಹಾಗೂ ಎಎಸ್.ಐ ಸುರೇಶ್ ಪಡಾರ್, ಸಿಬ್ಬಂದಿಗಳಾದ ರಾಜು, ವಿವೇಕ್, ಸಂತೋಷ ಭೇಟಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.