ಬಂಟ್ವಾಳ: ಕ್ಷುಲ್ಲಕ ಕಾರಣಕ್ಕಾಗಿ ದ್ವಿಚಕ್ರ ವಾಹನ ಸವಾರನೋರರ್ವ ಸರಕಾರಿ ವಾಹನವೊಂದರ ಮಿರರ್ ಪುಡಿ ಮಾಡಿದ್ದಲ್ಲದೆ, ಕಾರಿನಲ್ಲಿದ್ದ ಸರಕಾರಿ ಅಧಿಕಾರಿಗಳಿಗೆ ಹಲ್ಲೆಗೆ ಮುಂದಾಗಿ ಅವ್ಯಾಚ್ಚ ಶಬ್ದಗಳಿಂದ ಬೈದಿರುವ ಘಟನೆ ಶನಿವಾರ ಬೆಳಿಗ್ಗೆ ತುಂಬೆ ಎಂಬಲ್ಲಿ ನಡೆದಿದೆ.
ಮಂಗಳೂರು ಜಿ.ಪಂ.ಕಚೇರಿಯ ವಾಹನವೊಂದರ ಚಾಲಕ ದೇವದಾಸ್ ಎಂಬವರು ಜಿ.ಪಂ.ಇಲಾಖೆಯ ಅಧಿಕಾರಗಳನ್ನು ಮಂಗಳೂರಿನಿಂದ ಪುತ್ತೂರಿಗೆ ಮುಖ್ಯವಾದ ಸಭೆಗೆ ಮೂವರು ಅಧಿಕಾರಿಗಳನ್ನು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಎದುರಿನಲ್ಲಿ ಹೋಗುತ್ತಿದ್ದ ವಾಹನ ಸವಾರನೋರ್ವ ಬ್ರೇಕ್ ಹಾಕಿದ್ದಾರೆ ಎಂಬ ಕಾರಣಕ್ಕೆ ಜಿ.ಪಂ.ಇಲಾಖೆಯ ವಾಹನ ಚಾಲಕ ಜಗದೀಶ್ ಅವರು ಕೂಡ ಬ್ರೇಕ್ ಹಾಕಿದ್ದಾರೆ.
ದ್ವಿಚಕ್ರ ವಾಹನದಲ್ಲಿ ವೇಗವಾಗಿ ಬರುತ್ತಿದ್ದ ಯುವಕ, ಕಾರಿನ ಹಿಂಬದಿಯಲ್ಲಿದ್ದು ಆತ ಕೂಡ ಬ್ರೇಕ್ ಹಾಕಿದಾಗ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ರಸ್ತೆ ಬಿದ್ದಿದ್ದಾನೆ ಎಂದು ಹೇಳಲಾಗಿದೆ. ಈ ಕಾರಣಕ್ಕಾಗಿ ಆತ ಕಾರಿಗೆ ದ್ವಿಚಕ್ರವಾಹನವನ್ನು ಅಡ್ಡ ಇಟ್ಟು, ತಡೆಒಡ್ಡಿ ಬಳಿಕ ಕಾರಿನ ಮಿರರ್ ಅನ್ನು ಪುಡಿಮಾಡಿ, ಚಾಲಕ ಸಹಿತ ಕಾರಿನಲ್ಲಿದ್ದ ಅಧಿಕಾರಿಗಳಿಗೆ ಅವ್ಯಾಚ್ಚ ಶಬ್ದಗಳಿಂದ ಬೈದಿರುವ ಘಟನೆ ನಡೆದಿದೆ.
ಇದನ್ನೂ ಓದಿ:ಪೊಲೀಸರೆಡೆಗೆ ಮಚ್ಚು ಬೀಸಿ ಕೊಲೆ ಆರೋಪಿಯ ಎಸ್ಕೇಪ್ ಯತ್ನ: ಪೊಲೀಸರಿಂದ ಗುಂಡಿನ ದಾಳಿ
ಘಟನೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಜಿ.ಪಂ.ಇಲಾಖೆಯ ವಾಹನ ಚಾಲಕ ಜಗದೀಶ್ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.