ಬಂಟ್ವಾಳ: ಬಿ.ಸಿ.ರೋಡು – ಪೊಳಲಿ ರಸ್ತೆಯ ಕಲ್ಪನೆಯಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮೂವರಿಗೆ ಕಣಜದ ಹುಳುಗಳು ಕಡಿದಿದ್ದು, ಈ ಪೈಕಿ ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ರವಿವಾರ ಸಂಭವಿಸಿದೆ.
ಗಂಭೀರ ಗಾಯಗೊಂಡಿರುವ ಕಲ್ಪನೆ ನಿವಾಸಿ ಪೂವಪ್ಪ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತರ ಇಬ್ಬರಾದ ಮಹೇಶ್ ಹಾಗೂ ಗೋಪಾಲ ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರವಿವಾರ ಮಧ್ಯಾಹ್ನ 12ರ ಸುಮಾರಿಗೆ ಈ ಮೂವರು ಬಿ.ಸಿ.ರೋಡಿಗೆ ಹೋಗಲು ಕಲ್ಪನೆ ಬಸ್ಸು ತಂಗುದಾಣಕ್ಕೆ ಆಗಮಿಸುವ ಸಂದರ್ಭದಲ್ಲಿ ಏಕಾಏಕಿ ನೋಣಗಳು ದಾಳಿ ಮಾಡಿವೆ. ಗಾಯಾಳುಗಳನ್ನು ಸ್ಥಳೀಯ ಆಟೋ ಚಾಲಕರು ಆಸ್ಪತ್ರೆಗೆ ಸಾಗಿಸಿದ್ದಾರೆ.