Advertisement

Bantwala: ರೈಲ್ವೆ ಓವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ಸಿಲುಕಿಕೊಂಡ ಲಾರಿ

11:14 AM Feb 13, 2024 | Team Udayavani |

ಬಂಟ್ವಾಳ: ರೋಲರ್ ವಾಹನವನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ರೈಲ್ವೆ ಓವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ಸಿಲುಕಿಕೊಂಡ ಘಟನೆ ಫೆ. 13ರ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ನಡೆದಿದ್ದು, ಕೆಲ ಹೊತ್ತು ಸಂಚಾರಕ್ಕೆ ಅಡ್ಡಿಯಾದ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ನಡೆದಿದೆ.

Advertisement

ಪವಿತ್ರ ಗುತ್ತಿಗೆ ಸಂಸ್ಥೆಗೆ ಸೇರಿದ ಸೊತ್ತುಗಳು ಇದಾಗಿದ್ದು, ಬೆಂಜನಪದವು ಸೈಟ್ ನಿಂದ ಪುತ್ತೂರು ಸವಣೂರು ಎಂಬಲ್ಲಿ ನಡೆಯಲಿರುವ ಕಾಮಗಾರಿಗೆ ರೋಲರ್ ಅನ್ನು ಲಾರಿಯಲ್ಲಿ ತುಂಬಿಸಿಕೊಂಡು ಹೋಗುವ ವೇಳೆ ಮೊಡಂಕಾಪು ಎಂಬಲ್ಲಿ ರೈಲ್ವೆಯ ಅಡಿಭಾಗದಲ್ಲಿ ಕ್ರಾಸ್ ಮಾಡಲು ಸಾಧ್ಯವಾಗದೆ ಸಿಲುಕಿಕೊಂಡಿದೆ.

ರೈಲ್ವೆಯ ಓವರ್ ಬ್ರಿಡ್ಜ್ ನ ಎತ್ತರಕ್ಕಿಂತ ಅಧಿಕ ಎತ್ತರದಲ್ಲಿ ಲಾರಿಯ ಲೋಡ್ ಮಾಡಿಕೊಂಡಿದ್ದೇ ಈ ಘಟನೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಘಟನೆಯಿಂದ ರೈಲ್ವೆ ಇಲಾಖೆಗೆ ಸೇರಿದ ಕಬ್ಬಿಣದ ರಾಡ್ ತುಂಡಾಗಿ ಲಾರಿಯ ಮೇಲೆ ಬಿದ್ದಿದೆ. ‌ಅದೃಷವಶಾತ್ ಬೇರೆ ಯಾವುದೇ ವಾಹನಗಳ‌ ಮೇಲೆ ಬೀಳದೆ ಇದ್ದು, ಯಾವ ಅಪಾಯಕಾರಿ ಘಟನೆ ನಡೆದಿಲ್ಲ.

ಸ್ಥಳಕ್ಕೆ ರೈಲ್ವೆ ಇಲಾಖೆಯವರು ಆಗಮಿಸಿದ್ದು, ಘಟನೆಯಿಂದ ಆಗಿರುವ ನಷ್ಟಕ್ಕೆ ಪರಿಹಾರದ ಬಗ್ಗೆ ಲಾರಿಯವರಲ್ಲಿ ಮಾತುಕತೆ ನಡೆಸುತ್ತಿದ್ದಾರೆ.

Advertisement

ಘಟನೆ ನಡೆದ ಸಂದರ್ಭ ಸಂಚಾರಕ್ಕೆ ಅಡಚಣೆಯಾಗಿದ್ದು, ಮೆಲ್ಕಾರ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕ್ರೇನ್ ಬಳಸಿ ಲಾರಿಯನ್ನು ಬದಿಗೆ ಸರಿಸಿ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿದರು.

ಎ.ಎಸ್.ಐ.ಗಳಾದ ಜನಾರ್ಧನ, ಸುರೇಶ್ ಪಡಾರ್ ಮತ್ತು ಸಿಬ್ಬಂದಿ ಅಭಿಷೇಕ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next