ಬಂಟ್ವಾಳ: ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಸಹಿತ ಪ್ರಯಾಣಿಕರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೇ. 30 ರಂದು ಭಂಡಾರಿ ಬೆಟ್ಟು ಎಂಬಲ್ಲಿ ನಡೆದಿದೆ.
ರಿಕ್ಷಾ ಚಾಲಕ ಬಂಟ್ವಾಳ ನಾವೂರ ನಿವಾಸಿ ತಾರನಾಥ, ರಿಕ್ಷಾ ಪ್ರಯಾಣಿಕ ಶಂಕರ ಹಾಗೂ ಬೈಕ್ ಸವಾರ, ಉಜಿರೆ ನಿವಾಸಿ ಜೊಸ್ಟಿಲಿನ್ ಡಿ.ಸೋಜ, ಸಹ ಸವಾರ ರಶ್ಮಿತ್ ನಾಲ್ವರು ಗಾಯಗೊಂಡವರು.
ಮಂಗಳವಾರ ಮಧ್ಯಾಹ್ನ ಬೈಕ್ ಸವಾರ ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಭಂಡಾರಿಬೆಟ್ಟು ಎಂಬಲ್ಲಿ ಬಿಸಿರೋಡಿನಿಂದ ಬಂಟ್ವಾಳ ಕಡೆಗೆ ಹೋಗುವ ಸಂದರ್ಭ ಎರಡು ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.
ಢಿಕ್ಕಿಯಾದ ರಭಸಕ್ಕೆ ರಿಕ್ಷಾ ಹಾಗೂ ಬೈಕ್ ಎರಡು ವಾಹನಗಳು ಜಖಂಗೊಂಡಿದೆ ಹಾಗೂ ಎರಡು ವಾಹನಗಳ ಚಾಲಕರಿಗೆ ಗಂಭೀರವಾದ ಗಾಯವಾಗಿದ್ದು, ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Related Articles
ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಮೂರ್ತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.