Advertisement

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

01:48 PM May 07, 2024 | Team Udayavani |

ಬಂಟ್ವಾಳ: ಬಿಸಿರೋಡಿನ ಹೆಸರಾಂತ ಹೋಟೆಲ್ ವೊಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ‌ಘಟನೆ ಮೇ.7ರ ಮಂಗಳವಾರ ನಡೆದಿದೆ.

Advertisement

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ (30)  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ಹೋಟೆಲ್ ವೊಂದರಲ್ಲಿ ರೂಮ್ ಮಾಡಿದ್ದ ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಮ್ ಬಾಗಿಲು ತೆರೆಯದೇ ಇದ್ದು, ಹೋಟೆಲ್ ಸಿಬ್ಬಂದಿಗಳು ಕರೆದರೂ ಯಾವುದೇ ಸ್ಪಂದನೆ ಇಲ್ಲದ ಕಾರಣ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಈತನ ಮೃತದೇಹದ ಪತ್ತೆಯಾಗಿದೆ.

ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ.

ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ ಸರಿಯಾದ ಸಮಯಕ್ಕೆ  ಹಿಂದಿರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ.

Advertisement

ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ಕಾರಣವನ್ನು ಎದುರಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಹಾಗಾಗಿ ಮಾನಸಿಕವಾಗಿ ನೊಂದ ಕಾರಣ ಈತ ಆತ್ಮಹತ್ಯೆ ‌ಮಾಡಿಕೊಳ್ಳಲು ಕಾರಣವಾಗಿರಬಹುದು ‌ಎಂದು ಪೊಲೀಸರು ಶಂಕಿಸಿದ್ದು,ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಬೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next