ಬಂಟ್ವಾಳ: ಕಾರೊಂದು ಓವರ್ ಟೇಕ್ ಮಾಡುತ್ತಿದ್ದ ಭರದಲ್ಲಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೆಲ್ಕಾರ್ ಟ್ರಾಫಿಕ್ ಠಾಣೆಯ ಮುಂಭಾಗದಲ್ಲಿ ಎದುರಿನಿಂದ ಬರುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಪ್ರತ್ಯೇಕ ದ್ವಿ ಚಕ್ರ ಸವಾರಿ ಮಾಡುತ್ತಿದ್ಧ ಸಹೋದರರು ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಎ.8 ರ ಶುಕ್ರವಾರ ಸಂಜೆ ವೇಳೆ ನಡೆದಿದೆ.
ಬೋಳಂಗಡಿ ನಿವಾಸಿಗಳಾದ ರಿಜ್ವಾನ್ ಮತ್ತು ರಮೀಜ್ ಗಾಯಗೊಂಡವರು.
ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯ ಮುಂಭಾಗದಲ್ಲಿ ವಿಟ್ಲ ಕಡೆಯಿಂದ ಕೆಲಸ ಮುಗಿಸಿ ಕಾರಿನಲ್ಲಿ ಅತೀ ವೇಗದಿಂದ ಮನೆಗೆ ಬರುತ್ತಿದ್ದ ವೇಳೆ ಮೆಲ್ಕಾರ್ ನಿಂದ ಉಪವಾಸ ಬಿಡಲು ಮನೆಗೆ ತೆರಳುತ್ತಿದ್ದ ಹೋಟೆಲ್ ಕಾರ್ಮಿಕರ ದ್ವಿಚಕ್ರ ವಾಹನಕ್ಕೆ ನೇರವಾಗಿ ಡಿಕ್ಕಿ ಹೊಡೆದಿದೆ.
ಢಿಕ್ಕಿಯ ಪರಿಣಾಮ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಎರಡು ಸ್ಕೂಟರ್ ನಲ್ಲಿ ಸವಾರಿ ಮಾಡುತ್ತಿದ್ದ ಸವಾರರು ಗಾಯಗೊಂಡಿದ್ದಾರೆ .
ಗಾಯಗೊಂಡವರನ್ನು ಬಿಸಿರೋಡಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಇದನ್ನೂ ಓದಿ : ಲೇಔಟ್ ನಿರ್ಮಿಸಲು ಹಣಕ್ಕೆ ಬೇಡಿಕೆ : ಎಸಿಬಿ ಬಲೆಗೆ ಬಿದ್ದ ಸಿಡಿಎ ಸಹಾಯಕ ಯೋಜನಾಧಿಕಾರಿ