ಬಂಟ್ವಾಳ: ತಾಲೂಕಿನ ಸಜೀಪ ಪಡು ಗ್ರಾಮದ ತಲೆಮೊಗರು ಎಂಬಲ್ಲಿ ಭೋರ್ಗರೆಯುವ ನೇತ್ರಾವತಿ ನದಿಗೆ ಈಜಲು ಎಂದು ಹೋಗಿರುವ ಐವರು ಬಾಲಕರಲ್ಲಿ ಓರ್ವ ಯುವಕ ನೀರು ಪಾಲಾಗಿದ್ದು, ನಾಲ್ವರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ನಡೆದಿದೆ.
ತಲೆಮೊಗರು ನಿವಾಸಿ ರುಕ್ಮಯ ಅವರ ಮಗ ಅಶ್ವಿಥ್ (19) ನೀರು ಪಾಲಾದ ಯುವಕ.
ರಕ್ಷಣೆ ಮಾಡಿದವರಲ್ಲಿ ಹರ್ಷಿತ್ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದಂತೆ ಸ್ನೇಹಿತರಾದ ಲಿಖಿತ್, ವಿಕೇಶ್ , ವಿಶಾಲ್ ಅವರನ್ನು ರಕ್ಷಣೆ ಮಾಡಲಾಗಿದೆ.
ಸ್ನೇಹಿತರಾದ ಐವರು ಸಂಜೆ 4 ಗಂಟೆ ವೇಳೆಗೆ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದಾರೆ ಎಂದು ಹೇಳಲಾಗಿದೆ. ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಮಿತಿಮೀರಿ ಹರಿಯುತ್ತಿದ್ದು ಅಪಾಯಕಾರಿ ಎಂದು ಗೊತ್ತಿದ್ದು, ಮಕ್ಕಳು ಈ ರೀತಿ ನದಿಗೆ ಇಳಿಯುವುದರ ಬಗ್ಗೆ ಮನೆಯವರು ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : ಮಂಗಳೂರು: ಗೋಮಾಂಸ ಮಾರಾಟ ದಂಧೆ ಭೇದಿಸಿದ ಪೊಲೀಸರು; ಆರೋಪಿ ಪರಾರಿ
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಭೇಟಿ ನೀಡಿ ನೀರು ಪಾಲಾದ ಅಶ್ವಿಥ್ ನ ಪತ್ತೆಗಾಗಿ ಸ್ಥಳೀಯ ಮುಳುಗು ತಜ್ಞರ ಸಹಾಯ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳ ಮೂಲಕ ಹುಡುಕಾಟ ನಡೆಸಿದ್ದಾರೆ. ಆದರೆ ರಾತ್ರಿಯಾದರೂ ಹರ್ಷಿತ್ ಪತ್ತೆಯಾಗಿಲ್ಲ.