Advertisement

ವಿವಾಹ ವಿಚ್ಛೇದನ ದೂರಿನ ವಿಚಾರಣೆ: ಅಧಿಕಾರಿಗಳ ಎದುರೇ ಆತ್ಮಹತ್ಯೆಗೆ ಯತ್ನ

01:40 AM Feb 23, 2023 | Team Udayavani |

ಬಂಟ್ವಾಳ: ವಿವಾಹ ವಿಚ್ಛೇದನದ ದೂರಿನ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಆಗಮಿಸಿದ್ದ ವ್ಯಕ್ತಿಯೋರ್ವ ಅಧಿಕಾರಿಗಳ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಬಿ.ಸಿ.ರೋಡಿನಲ್ಲಿ ನಡೆದಿದೆ.

Advertisement

ಮಹಾರಾಷ್ಟ್ರ ಮೂಲದ ವ್ಯಕ್ತಿ ಪ್ರಕಾಶ್‌ ಚೌಗಲೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ಪ್ರಸ್ತುತ ಅವರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಬಿ.ಸಿ.ರೋಡು ನಿವಾಸಿ ಮಹಿಳೆಯನ್ನು ಪ್ರೀತಿಸಿ ವಿವಾಹವಾಗಿದ್ದು, ಬಳಿಕ ಇವರಿಬ್ಬರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿ ವಿವಾಹ ವಿಚ್ಛೇದನದ ಹಂತಕ್ಕೆ ತಲುಪಿತ್ತು.

ಇದೇ ವಿಚಾರವಾಗಿ ಮಹಿಳೆಯ ದೂರಿನ ಆಧಾರದಲ್ಲಿ ಬಂಟ್ವಾಳ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದ ವೇಳೆ ಆತ ಬಾಟಲಿಯಲ್ಲಿ ತಂದಿದ್ದ ವಿಷವನ್ನು ಏಕಾಏಕಿ ಕುಡಿದಿದ್ದಾನೆ. ಇದರಿಂದ ಆತಂಕಗೊಂಡ ಅಧಿಕಾರಿಗಳು ತತ್‌ ಕ್ಷಣ ಆತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆತ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡು ಬಂದಿದ್ದ ಎನ್ನಲಾಗಿದ್ದು, ವಿಷದ ಬಾಟಲ್‌ ಜತೆಗೆ ಡೆತ್‌ ನೋಟ್‌ ಕೂಡ ಬರೆದುಕೊಂಡು ಬಂದಿದ್ದ ಎನ್ನಲಾಗಿದೆ. ಸಿಡಿಪಿಒ ಅಧಿಕಾರಿಗಳ ಮಾಹಿತಿಯಂತೆ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next