Advertisement

KSRTC ಬಸ್ಸಿನೊಳಗೆ ಕೋಳಿ ಮಾಂಸ ತಂದ ಪ್ರಯಾಣಿಕ, ಬಸ್ ಸಮೇತ ಠಾಣೆಗೊಯ್ದ ಚಾಲಕ

12:14 PM Oct 15, 2023 | Team Udayavani |

ಬಂಟ್ವಾಳ: ಪ್ರಯಾಣಿಕನೋರ್ವ ಚೀಲದಲ್ಲಿ ಕೋಳಿ ಮಾಂಸ ಹಿಡಿದುಕೊಂಡು ಬಸ್ ಹತ್ತಿದ ಕಾರಣಕ್ಕಾಗಿ ಆತನಿಗೆ ನಿರ್ವಾಹಕ ಅವ್ಯಾಚ್ಚ ಶಬ್ದದಿಂದ ಬೈದುದಲ್ಲದೆ, ಚಾಲಕ ಸೀದಾ ಪ್ರಯಾಣಿಕರನ್ನು ಕೂರಿಸಿಕೊಂಡು ಪೋಲಿಸ್ ಠಾಣೆಗೆ ತಂದ ಘಟನೆ ನಡೆದಿದೆ.

Advertisement

ಸುರೇಶ್ ಎಂಬವರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಕೆ.ಎಸ್.ಆರ್.ಟಿ.ಸಿ.ಬಸ್ ಹತ್ತಿದ್ದಾರೆ. ಈ ವೇಳೆ ವೇಳೆ ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ಈತನ ಕೈಯಲ್ಲಿ ಚೀಲವೊಂದ್ದಿದ್ದು, ಇದರ ಬಗ್ಗೆ ವಿಚಾರಿಸಿದ್ದಾನೆ. ಪ್ರಯಾಣಿಕ ಕೋಳಿ ಮಾಂಸ ಎಂದು ತಿಳಿಸಿದ್ದಾನೆ, ಅಷ್ಟು ಕೇಳಿದ್ದೆ ತಡ ಪ್ರಯಾಣಿಕನನ್ನು ಬಸ್ ನಿಂದ ಇಳಿಯುವಂತೆ ಒತ್ತಾಯಿಸಿದ್ದಾನೆ. ಕೋಳಿ ಮಾಂಸ ಬಸ್ ನಲ್ಲಿ ತರಲು ಅವಕಾಶವಿಲ್ಲ ಎಂಬ ವಾದ ನಿರ್ವಾಹಕನದ್ದು, ಆದರೆ ಕೂಲಿ ಕಾರ್ಮಿಕನಿಗೆ ಇದರ ಅರಿವಿಲ್ಲದೆ , ಬಸ್ ನಿಂದ ಇಳಿಯಲು ಒಪ್ಪಲಿಲ್ಲ.

ಇವರಿಬ್ಬರ ನಡುವೆ ಕೆಲ ಹೊತ್ತು ವಾಗ್ವಾದ ನಡೆದ ಬಳಿಕ ನಿರ್ವಾಹಕ ಪ್ರಯಾಣಿಕನಿಗೆ ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಹೇಳಲಾಗಿದೆ.

ಕಡೆಗೂ ಪ್ರಯಾಣಿಕ ಬಸ್ ನಿಂದ ಇಳಿಯದ ಕಾರಣಕ್ಕಾಗಿ ಚಾಲಕ ಪ್ರಯಾಣಿಕರು ತುಂಬಿದ್ದ ಬಸ್ಸನ್ನೇ ಪೋಲೀಸ್ ಠಾಣೆಗೆ ತಂದು ಪ್ರಯಾಣಿಕನನ್ನು ಎಳೆದು ಇಳಿಸಿದ್ದಾನೆ.

ಎಸ್.ಐ.ಬುದ್ದಿಮಾತು :
ಈ ವೇಳೆ ಠಾಣೆಯಲ್ಲಿದ್ದ ಎಸ್.ಐ.ರಾಮಕೃಷ್ಣ ಅವರು ಕೆ.ಎಸ್. ಆರ್.ಟಿ.ಸಿ.ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಬುದ್ದಿ ಮಾತು ಹೇಳಿದ್ದಾರೆ.

Advertisement

ಬಡವರ ಗೋಳು ಕೇಳುವವರು ಯಾರು?
ಕೂಲಿ ಕಾರ್ಮಿಕರು ಬಸ್ ನಲ್ಲಿ ಮಾಂಸ, ಮೀನು ಕೊಂಡುಹೋಗಲು ಅವಕಾಶ ವಿಲ್ಲ ಎಂದಾದರೆ ಮತ್ತೆ ಹೇಗೆ ಕೊಂಡುಹೋಗುವುದು ಎಂಬ ಪ್ರಶ್ನೆಯನ್ನು ಈತ ಮಾಡಿದ್ದಾನೆ.

ಒಂದು ಕೆ.ಜಿ.ಕೋಳಿಗೋಸ್ಕರ ಕಾರು ,ರಿಕ್ಷಾ ಬಾಡಿಗೆ ಮಾಡಿಕೊಂಡು ಹೋಗಬೇಕಾ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ.

ಬಡವರು ಕೋಳಿ ಮಾಂಸ ಕೊಂಡು ಹೋದರೆ ಅವರನ್ನು ಪೋಲೀಸ್ ಠಾಣೆಗೆ ಕರೆದುಕೊಂಡು ಹೋಗುವುದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕರದ್ದು, ನಿರ್ವಾಹಕ ಚಾಲಕರ ಇಂತಹ ನಡೆಯ ಬಗ್ಗೆ ಅಕ್ರೋಶಗಳು ವ್ಯಕ್ತವಾಗಿದೆ.

ಕೋಳಿ,ಮೀನು ತರುವಂತಿಲ್ಲ:
ಬಸ್ ನಲ್ಲಿ ಕೋಳಿ, ಮೀನು ಮಾಂಸ ತರುವಂತಿಲ್ಲ, ಜೀವ ಇರುವ ವಸ್ತುಗಳನ್ನು ತರಬಹುದು, ಮಾಂಸವಾದರೆ ಇತರರಿಗೆ ವಾಸನೆ ಬರುತ್ತದೆ, ಇತರ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಎಂಬ ನಿಟ್ಟಿನಲ್ಲಿ ನಿಗಮ ಅದೇಶ ಮಾಡಿದೆ ಎಂದು ಕೆ.ಎಸ್. ಆರ್.ಟಿ.ಸಿ.ಬಂಟ್ವಾಳ ವಿಭಾಗದ ವಿಭಾಗೀಯ ಅಧಿಕಾರಿ ಶ್ರೀಶ ಭಟ್ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Bharat Mata ki Jai: ಭಾರತದಲ್ಲಿ ಬದುಕಬೇಕೆಂದರೆ ‘ಭಾರತ್ ಮಾತಾ ಕಿ ಜೈ’ ಹೇಳಿ: ಕೇಂದ್ರ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next