Advertisement

ಕೋಳಿ ಫೀಡ್ ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಬೆಂಕಿ ತಾಗಿ ಅಪಘಾತ

11:18 AM Apr 29, 2020 | keerthan |

ಬಂಟ್ವಾಳ: ಕೋಳಿ ಫೀಡ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಬೆಂಕಿ ತಾಗಿ ಢಿಕ್ಕಿಯಾದ ಘಟನೆ ಬಂಟ್ವಾಳದ ಮೆಲ್ಕಾರ್ ಸಮೀಪದ ಮಾರ್ನಬೈಲು ಎಂಬಲ್ಲಿ ನಡೆದಿದೆ.

Advertisement

ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರಿಗೂ ಗಾಯಗಳಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಿನಿ ಲಾರಿಯಲ್ಲಿ ಇಂದು ಬೆಳಗ್ಗೆ ಕಂದೂರಿನಿಂದ ಫೀಡ್ ಪ್ರಾಡಕ್ಟ್ ತುಂಬಿಸಿಕೊಂಡು ಹೋಗುವ ವೇಳೆ ಈ ಘಟನೆ ನಡೆದಿದ್ದು, ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದುಬಂದಿಲ್ಲ. ಲಾರಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ, ನಂತರ ಮನೆಯೊಂದರ ಕಂಪೌಂಡ್ ಗೋಡೆಗೆ ಢಿಕ್ಕಿ ಹೊಡೆದಿದೆ.

ಲಾರಿಗೆ ಬೆಂಕಿ ತಗುಲಿ ಬಳಿಕ ಅಪಘಾತ ಸಂಭವಿಸಿದೆಯಾ ಅಥವಾ ಢಿಕ್ಕಿಯಾದ ಬಳಿಕ ಲಾರಿಗೆ ಬೆಂಕಿ ತಾಗಿದೆಯಾ ಎಂಬುದರ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿಯಬೇಕಾಗಿದೆ.

ಬಂಟ್ವಾಳ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು, ಲಾರಿಗೆ ತಾಗಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಕೆ.ವಿ.ಅವರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮಕೈಗೊಂಡಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next