Advertisement

ಬಂಟ್ವಾಳ ಪುರಸಭೆ: ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್, ಉಪಾಧ್ಯಕ್ಷರಾಗಿ ಜೆಸಿಂತಾ ಡಿಸೋಜಾ ಆಯ್ಕೆ

02:07 PM Nov 07, 2020 | keerthan |

ಬಂಟ್ವಾಳ: ಬಹಳ ಕುತೂಹಲ ಕೆರಳಿಸಿದ್ದ ಬಂಟ್ವಾಳ ಪುರಸಭೆಯ ಅಧ್ಯಕ್ಷರಾಗಿ ಕಾಂಗ್ರೆಸ್ ನ ಮೊಹಮ್ಮದ್ ಶರೀಫ್ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ನ ಜೆಸಿಂತಾ ಡಿಸೋಜಾ ಆಯ್ಕೆಯಾಗಿದ್ದಾರೆ.

Advertisement

ಶನಿವಾರ ಬಂಟ್ವಾಳ ಪುರಸಭಾ ಸಭಾಂಗಣದಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರು ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನಡೆಸಿದರು.

ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಚುನಾವಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಾರಂಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಎ.ಗೋವಿಂದ ಪ್ರಭು, ಕಾಂಗ್ರೆಸ್ ನಿಂದ ಮೊಹಮ್ಮದ್ ಶರೀಫ್, ಎಸ್.ಡಿ.ಪಿ.ಐ‌.ನಿಂದ ಮುನೀಶ್ ಆಲಿ, ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಮೀನಾಕ್ಷಿ ಗೌಡ, ಕಾಂಗ್ರೆಸ್ ನಿಂದ ಜೆಸಿಂತಾ ಡಿಸೋಜ ನಾಮಪತ್ರ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next