Advertisement

Bantwal:ರಿಕ್ಷಾ ಡಿಕ್ಕಿಯಾಗಿ ಸ್ಕೂಟರ್ ಸಹಸವಾರ ಮೃತ್ಯು

08:24 PM Apr 06, 2024 | Team Udayavani |

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ.

Advertisement

ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ ಬಿಸಿರೋಡು ಕಡೆಗೆ ಸ್ಕೂಟರ್ ನಲ್ಲಿ ಸಹಸವಾರನಾಗಿ ಸಂಚಾರ ಮಾಡುತ್ತಿದ್ದ ವೇಳೆ ನರಿಕೊಂಬು ದಿಂಡಿಗೆ ಎಂಬಲ್ಲಿ ರಿಕ್ಷಾ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಘಟನೆಯಿಂದ ರಿಕ್ಷಾ ಚಾಲಕ ಸಜೀಪ ನಿವಾಸಿ ಜಾಬೀರ್ ಕೂಡ ಗಾಯಗೊಂಡಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಪವನ್ ಬಿ.ಮೂಡ ಕಾಲೇಜಿನ ಪ್ರಥಮ ಪಿಯುಸಿ ವಿಭಾಗದಲ್ಲಿ ವ್ಯಾಸಂಗ ‌ಮಾಡುತ್ತಿದ್ದು, ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಯಾಗಿ ಗುರುತಿಸಿಕೊಂಡಿದ್ದ. ರಜಾ ದಿನಗಳಲ್ಲಿ ಅಜ್ಜನ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಠಾಣಾ ಪಿಎಸ್ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next