ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ಬಂಟ್ವಾಳ ಸಮೀಪದ ಚಂಡ್ತಿಮಾರ್ ಬಳಿ ಬುಧವಾರ ಮಧ್ಯಾಹ್ನ ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಟ್ಯಾಂಕರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರೋಶನ್ ಸೆರಾವೊ ಗಂಭೀರ ಗಾಯಗೊಂಡಿದ್ದರು ಕೊಡಲೇ ಅವರನ್ನು ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ರೋಶನ್ ಸೆರಾವೊ ಸಾವನ್ನಪ್ಪಿದ್ದಾರೆ.
ಮಧ್ಯಾಹ್ನದ ವೇಳೆ ನಡೆದ ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಹುಮನಾಬಾದ್: ಕೈಗಾರಿಕಾ ಪ್ರದೇಶದಲ್ಲಿ ಗಾಳಿ ಗುಣಮಟ್ಟ ಪರೀಕ್ಷೆ ಶುರು