Advertisement

ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್; ಸಹಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತ್ಯು

08:27 AM Dec 30, 2023 | Team Udayavani |

ಬಂಟ್ವಾಳ: ಲಾರಿಯೊಂದು ಡಿಕ್ಕಿಯಾಗಿ ದ್ವಿಚಕ್ರವಾಹನ ಸಹಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ.

Advertisement

‌‌ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ.

ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸಹಸವಾರ ಡಾಮರು ರಸ್ತೆಗೆ ಬಿದ್ದಿದ್ದು, ಆತನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಡಿಕ್ಕಿ ಹೊಡೆದ ಲಾರಿ ಸಹಿತ ಚಾಲಕ ಪರಾರಿಯಾಗಿದ್ದು, ಬಳಿಕ ಪೊಲೀಸರು ಲಾರಿಯನ್ನು ಪತ್ತೆ ಮಾಡಿದ್ದಾರೆ.

ಸ್ನೇಹಿತನ ಜೊತೆ ಅಜಿಲಮೊಗರು ಮಸೀದಿಯಲ್ಲಿ ನಡೆಯುವ ಉರೂಸ್ ಕಾರ್ಯಕ್ರಮಕ್ಕೆ ತೆರಳುವವರು ಎಂದು ಹೇಳಲಾಗಿದೆ.

Advertisement

ಬಂಟ್ವಾಳ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ಬಳಿಕ ಬಿಸಿರೋಡಿನ ಎನ್.ಜಿ.ಸರ್ಕಲ್ ನಲ್ಲಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next