ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವಳಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ತಲಪಾಡಿಯಲ್ಲಿ ನಡೆದಿದ್ದು, ಘಟನೆಯಿಂದ ಮಹಿಳೆ ಮೃತಪಟ್ಟಿದ್ದಾಳೆ.
ಮೂಲತಃ ಕೇರಳ ನಿವಾಸಿ ಕೂಲಿ ಕಾರ್ಮಿಕೆ ರಾಜಮ್ಮ (60) ಮೃತಪಟ್ಟ ಮಹಿಳೆ.
ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ಮೇ.26 ರಂದು ಇಂದು ಬೆಳಿಗ್ಗೆ ಸುಮಾರು 11 ಗಂಟೆ ವೇಳೆ ನಡೆದುಕೊಂಡು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕೆಯೊರ್ವಳಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಮಹಿಳೆಯನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
Related Articles
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ. ಮೂರ್ತಿ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಹಿಟ್ ಎಂಡ್ ರನ್ ವಾಹನ ಪತ್ತೆಗಾಗಿ ಬೆನ್ನು ಹತ್ತಿದ್ದಾರೆ.
ಇದನ್ನೂ ಓದಿ : ಜ್ಞಾನವಾಪಿ ಮಸೀದಿ ಪ್ರಕರಣ: ಮುಂದಿನ ವಿಚಾರಣೆ ಮೇ 30ಕ್ಕೆ ಮುಂದೂಡಿಕೆ