Advertisement
ಇದೀಗ ಶರಣ್ ಪಂಪ್ ವೆಲ್ ಆಗಮಿಸಿದ್ದಾರೆ.
Related Articles
Advertisement
ಪ್ರಚೋದನಕಾರಿಯಾಗಿ ಹೇಳಿಕೆ ನೀಡಿರುವ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಹಾಗೂ ಪುರಸಭಾ ಸದಸ್ಯ ಹಸೈನಾರ್ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ.
ಸವಾಲಿನ ಸಂದೇಶ ವೈರಲ್:ಈದ್ ಮಿಲಾದ್ ರ್‍ಯಾಲಿಯ ಮೇಲೆ ದಾಳಿ ಮಾಡಿದರೆ ಏನಾಗಬಹುದು ಎಂದು ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಅವರು ಸವಾಲು ಹಾಕಿರುವ ವಾಯ್ಸ್ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಸೆ. 16ರಂದು ಬಿ.ಸಿ.ರೋಡಿನ ಕೈಕಂಬದಲ್ಲಿ ನಡೆಯುವ ಮಿಲಾದ್ ರ್‍ಯಾಲಿ ಸಂದರ್ಭ ಬಂದು ನಿಲ್ಲುವಂತೆ ಸವಾಲು ಹಾಕಿದ್ದಾರೆ ಎಂದು ತಿಳಿದುಬಂದಿದೆ. ಇದು ವೈರಲ್ ಆಗಿದ್ದು, ಈ ಬಗ್ಗೆ ಹಿಂದೂ ನಾಯಕರು, ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ. ಕೋಮು ಸೌಹಾರ್ದ ಹಾಳುಗೆಡುವುವ ಉದ್ದೇಶ ದಿಂದಲೇ ಈ ರೀತಿಯ ಸವಾಲಿನ ಆಡಿಯೋ ಸಂದೇಶ ಹಾಕಲಾಗಿದೆ ಎಂದು ಹಿಂದೂ ಸಂಘಟನೆಗಳು ದೂರಿವೆ.