Advertisement

ಬಂಟ್ವಾಳ: ತೀವ್ರ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು

06:11 PM Sep 07, 2022 | Team Udayavani |

ಬಂಟ್ವಾಳ: ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಕೊನೆಯುಸಿರೆಳೆದ್ದಾಳೆ.

Advertisement

ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ ಕವಿತಾ ( 20) ಮೃತಪಟ್ಟ ವಿದ್ಯಾರ್ಥಿನಿ.

ಇದನ್ನೂ ಓದಿ:ಜನತೆಗೆ ಜಲೋತ್ಸವದ ಸಂಕಟ, ಬಿಜೆಪಿಗೆ ಜನೋತ್ಸವದ ಚೆಲ್ಲಾಟ!: ಕಾಂಗ್ರೆಸ್

ಕವಿತಾ ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಮಂಗಳವಾರ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ತುಂಬೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೋದ ವೇಳೆ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕವಿತಾ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕವಿತಾ ಸಿದ್ದಕಟ್ಟೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿನಿಯಾಗಿದ್ದು, ಕಲಿಕೆಯಲ್ಲಿ ಮುಂದಿದ್ದಳು.  ಸೆ.12 ರಂದು ಪರೀಕ್ಷೆ ನಡೆಯಲಿದ್ದು, ಇದರ ತಯಾರಿಯಲ್ಲಿದ್ದಳು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next