Advertisement

Bantwal: ರೈಲ್ವೇ ಹಳಿಗೆ ಉರುಳಿ ಬಿದ್ದ ಕಾಂಕ್ರೀಟ್‌ ಮಿಕ್ಸರ್‌ ಮೆಷಿನ್‌

10:08 PM Oct 11, 2023 | Team Udayavani |

ಬಂಟ್ವಾಳ: ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿ ನಿರ್ವಹಿಸುತ್ತಿದ್ದ ಕಾಂಕ್ರೀಟ್‌ ಮಿಕ್ಸರ್‌ ಮೆಷಿನ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್‌ಫಾರ್ಮ್ ನಿಂದ ರೈಲ್ವೇ ಹಳಿಗೆ ಬಿದ್ದ ಘಟನೆ ಬುಧವಾರ ನಡೆದಿದೆ.

Advertisement

ಘಟನೆಯಲ್ಲಿ ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಸಂಜೆಯ ವೇಳೆಗೆ ಘಟನೆ ನಡೆದಿದ್ದು, ಈ ವೇಳೆ ಯಾವುದೇ ರೈಲು ಆಗಮಿಸದ ಹಿನ್ನೆಲೆಯಲ್ಲಿ ತೊಂದರೆ ಉಂಟಾಗಿಲ್ಲ. ಹಳಿಯಿಂದ ಮೆಷಿನ್‌ ಅನ್ನು ತತ್‌ಕ್ಷಣ ತೆರವುಗೊಳಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next