ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಸುಮಾರು 3.18 ಕೋ.ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯ ಕಟ್ಟಡ ಕಾಮಗಾರಿಯನ್ನು ಶುಕ್ರವಾರ ರಾಜ್ಯ ಪೊಲೀಸ್ ವಸತಿ ನಿಗಮದ ಎಡಿಜಿಪಿ ರಾಮಚಂದ್ರ ರಾವ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಠಾಣೆಯ ಕಟ್ಟಡದ ಕಾಮಗಾರಿಯು ಗುಣಮಟ್ಟದಿಂದ ಕೂಡಿರುವ ಜತೆಗೆ ಉತ್ತಮ ದರ್ಜೆಯ ವಸ್ತುಗಳನ್ನು ಬಳಸಬೇಕು. ಕಟ್ಟಡವು ಪ್ರವಾಹದ ನೀರು ನಿಲ್ಲುವ ಸ್ಥಳದಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಹೀಗಾಗಿ ಕೆಳಭಾಗದಲ್ಲಿ ತಡೆಗೋಡೆಯು ಕೂಡ ಆಧುನಿಕ ತಂತ್ರಜ್ಞಾನದ ಜತೆಗೆ ಗುಣಮಟ್ಟದಿಂದ ಕೂಡಿರು
ವಂತೆ ಕಟ್ಟಡದ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಅಡಿಶನಲ್ ಎಸ್‌ಪಿ ಜಗದೀಶ್, ಬಂಟ್ವಾಳ ಡಿವೈಎಸ್‌ಪಿ ಎಸ್. ವಿಜಯ ಪ್ರಸಾದ್, ಬಂಟ್ವಾಳ ನಗರ ಪೊಲೀಸ್ ಇನ್‌ಸ್ಪೆಕ್ಟರ್ ಅನಂತಪದ್ಮನಾಭ, ಸಂಚಾರ ಠಾಣಾ ಪಿಎಸ್‌ಐ ಸುತೇಶ್ ಕೆ.ಪಿ., ಕಂಟ್ರೋಲ್ ಎಂಜಿನಿಯರ್ ಶಿವಪ್ರಸಾದ್, ಕಾರ್ಯಪಾಲಕ ಎಂಜಿನಿಯರ್ ಸಣ್ಣೇಗೌಡ, ಸಹಾಯಕ ಕಾರ್ಯಪಾಲಕ ಎಂಜಿನಿ ಯರ್ ರಾಜೇಶ್, ಅಧಿಕಾರಿಗಳು, ಪೊಲೀಸ್ ಸಿಬಂದಿ, ಗುತ್ತಿಗೆದಾರರು ಜತೆಗಿದ್ದರು.