Advertisement
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿಶೇಷ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಇರಾದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿ 1.25 ಲಕ್ಷ ರೂ. ಮೌಲ್ಯದ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾಸರಗೋಡಿನ ಚೆರ್ವತ್ತೂರು ಗ್ರಾಮದ ಪಿಲಾವಲಪ್ಪು, ಕೋತಂಕರ ನಿವಾಸಿ ಬಶೀರ್ ಕೆ ಪಿ. ಯಾನೆ ಆಕ್ರಿ ಬಶೀರ್ (44), ಕೇರಳದ ಕೊಲ್ಲಂ ಜಿಲ್ಲೆಯ ಆಲಪ್ಪಾಡ್ ನ ಪ್ರಕಾಶ್ ಬಾಬು ಯಾನೆ ಮಹಮ್ಮದ್ ನಿಯಾಜ್(46) ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ನಿವಾಸಿ ಎಫ್.ಜೆ.ಮಹಮ್ಮದ್ ಇಸ್ಮಾಯಿಲ್ ಬಂಧಿತ ಆರೋಪಿಗಳು.
ಬಂಧಿತರಿಂದ 1.25 ಲಕ್ಷ ರೂ. ಮೌಲ್ಯದ ಬೆಳ್ಳಿಯ ಆಭರಣಗಳು ಹಾಗೂ ಕಾರನ್ನು ವಶಪಡಿಸಲಾಗಿದೆ. ಡಿವಿಆರ್ ಕೂಡ ಹೊತ್ತೊಯ್ದಿದ್ದ ಆರೋಪಿಗಳು:
ಆರೋಪಿಗಳು ನ. 4ರಂದು ದೇವಸ್ಥಾನದ ಮುಂಬಾಗಿಲ ಮೂಲಕ ಒಳ ನುಗ್ಗಿ ಕಳ್ಳತನ ನಡೆಸಿ ಸಿಸಿ ಕ್ಯಾಮರಾದ ಡಿವಿಆರ್ನ್ನು ಕೂಡ ಹೊತ್ತೂಯ್ದಿದ್ದರು. ಅದಕ್ಕೆ ಮುನ್ನಾದಿನ ಫರಂಗಿಪೇಟೆ ಸುಜೀರಿನ ಶ್ರೀ ರವಳನಾಥ ಮಂದಿರದಲ್ಲೂ ಕಳ್ಳತನ ನಡೆದಿತ್ತು. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ್ ಇಲಾಖೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆಗೆ ಇಳಿದಿತ್ತು.
Related Articles
Advertisement