Advertisement

ರಾಜೀನಾಮೆಗೆ ತಪ್ಪು ಅರ್ಥ ಕಲ್ಪಿಸುವುದು ಬೇಡ: ಬಾಪುಗೌಡ

02:55 PM Jun 16, 2021 | Team Udayavani |

ಧಾರವಾಡ: ಹಿರಿಯರ ಮಾರ್ಗದರ್ಶನದಂತೆ ನನಗೆ ನೀಡಿದ 30 ತಿಂಗಳ ಅವಧಿ ಪೂರ್ಣಗೊಂಡಿದ್ದರಿಂದ ರಾಜೀನಾಮೆ ನೀಡಿದ್ದು, ಇದರಲ್ಲಿ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿದಿಲ್ಲ. ಇದಕ್ಕೆ ತಪ್ಪು ಅರ್ಥ ಕಲ್ಪಿಸುವುದು ಬೇಡ. ಇನೂಡೆರಡು ವರ್ಷ ಸಾಮಾನ್ಯ ನಿರ್ದೇಶಕನಾಗಿ ಸೇವೆ ಸಲ್ಲಿಸುತ್ತೇನೆ ಎಂದು ಕೆಸಿಸಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಬಾಪುಗೌಡ ಪಾಟೀಲ ಹೇಳಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2018ರಲ್ಲಿ ನಡೆದ ಬ್ಯಾಂಕ್‌ ಆಡಳಿತ ಮಂಡಳಿ ಚುನಾವಣೆಯಲ್ಲಿ ನವಲಗುಂದ ತಾಲೂಕು ಪ್ರತಿನಿಧಿಸಿ ನಿರ್ದೇಶಕನಾಗಿ ಆಯ್ಕೆಯಾದೆ. ನಂತರ ರಾಜಕೀಯ ಹಿತೈಷಿಗಳ ಸಹಕಾರದಿಂದ ನಿರ್ದೇಶಕರು ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದರು. ಇದಾದ ಬಳಿಕ 30 ತಿಂಗಳ ಅವಧಿವರೆಗೆ ಅಧ್ಯಕ್ಷನಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ಬ್ಯಾಂಕ್‌ ಅಭಿವೃದ್ಧಿ ಪಥದಲ್ಲಿ ಸಾಗುವಂತೆ ಮಾಡಿದ್ದು, ಹಿರಿಯರ ಮಾರ್ಗದರ್ಶನದಂತೆ ಮೇ 10ರಂದು ರಾಜೀನಾಮೆ ನೀಡಿದ್ದೇನೆ ಎಂದರು.

ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಕೆಸಿಸಿ ಬ್ಯಾಂಕ್‌ ಉತ್ತಮ ಲಾಭ ಗಳಿಸುವಂತೆ ಮಾಡಿದ್ದೇನೆ. ಕೊರೊನಾ ಸಂಕಷ್ಟದಲ್ಲಿ ವಿಶೇಷವಾಗಿ 60 ಕೋಟಿ ರೂ. ಗಳಷ್ಟು ಕೃಷಿ ಬೆಳೆ ಸಾಲ ವಿತರಣೆ ಮಾಡಿರುವುದು ನನ್ನ ಅವಧಿಯ ಸಾಧನೆಯಾಗಿದೆ. ಇದಲ್ಲದೆ ಕಿಸಾನ್‌ ಬಳಕೆ ಸಾಲದ ಯೋಜನೆ, 16 ಸಾವಿರ ರೈತ ಸದಸ್ಯರಿಗೆ 43 ಕೋಟಿ ರೂ. ಸಾಲ ವಿತರಣೆ ಮಾಡಲಾಗಿದೆ. ಬ್ಯಾಂಕ್‌ ಇಡೀ ಆಡಳಿತ ಮಂಡಳಿ ಸಹಕಾರದಿಂದ ಈ ಸಾಧನೆ ಮಾಡಲಾಗಿದೆ. ಬ್ಯಾಂಕ್‌ನಲ್ಲಿ ಎರಡು ದಶಕ ಮೇಲ್ಪಟ್ಟು ವಸೂಲಾಗದೆ ಬಾಕಿ ಉಳಿದಿರುವ ವಿವಿಧ ಸಂಸ್ಕರಣ ಘಟಕಗಳ ಸಾಲ ವಸೂಲಾತಿಗೆ ವಿಶೇಷ ಯೋಜನೆ ಜಾರಿಗೆ ತಂದು ಸುಮಾರು 26 ಕೋಟಿ ರೂ. ಅಸಲು, ಬಡ್ಡಿ ಮೊತ್ತವನ್ನು ವಸೂಲಿ ಮಾಡಲಾಗಿದೆ. ಬ್ಯಾಂಕ್‌ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ ನಿರ್ದೇಶಕನಾಗಿ ಸೇವೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next