ಶ್ರೀನಗರ: ಭದ್ರತಾ ಪಡೆಯ ಯಶಸ್ವಿ ಕಾರ್ಯಾಚರಣೆಯಲ್ಲಿ ಮೂವರು ಪಾಕಿಸ್ತಾನಿ ಉಗ್ರರು ಎನ್ ಕೌಂಟರ್ ನಲ್ಲಿ ಹತ್ಯೆಗೀಡಾಗಿರುವ ಘಟನೆ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ನಡೆದಿದ್ದು, ಉಗ್ರರ ಪ್ರತಿದಾಳಿಯಲ್ಲಿ ಜಮ್ಮು-ಕಾಶ್ಮೀರ ಪೊಲೀಸ್ ಹುತಾತ್ಮರಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಭದ್ರತಾಲೋಪ? ತಮಿಳುನಾಡಿನಲ್ಲಿ ಬಿಜೆಪಿ ಮುಖಂಡನ ಹತ್ಯೆ, ಎಐಡಿಎಂಕೆ ಆಕ್ರೋಶ
ಘಟನೆ ಕುರಿತು ಮಾಹಿತಿ ನೀಡಿರುವ ಕಾಶ್ಮೀರದ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ವಿಜಯ್ ಕುಮಾರ್, ಭದ್ರತಾ ಪಡೆಯ ಎನ್ ಕೌಂಟರ್ ನಲ್ಲಿ ಮೂವರು ಪಾಕಿಸ್ತಾನಿ ಉಗ್ರರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳದಲ್ಲಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಬಾರಾಮುಲ್ಲಾದ ಕ್ರೀರಿ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಜಮ್ಮು-ಕಾಶ್ಮೀರ ಪೊಲೀಸರು, ಸೇನೆ ಮತ್ತು ಸಿಆರ್ ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿತ್ತು. ಈ ಸಂದರ್ಭದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಜಮ್ಮು-ಕಾಶ್ಮೀರ ಪೊಲೀಸ್ ಹುತಾತ್ಮರಾಗಿರುವುದಾಗಿ ವರದಿ ವಿವರಿಸಿದೆ.
ಈ ಕಾರ್ಯಾಚರಣೆಯೊಂದಿಗೆ ಇದು 2022ರಲ್ಲಿನ 49ನೇ ಎನ್ ಕೌಂಟರ್ ದಾಳಿಯಾಗಿದ್ದು, ಭದ್ರತಾ ಪಡೆ ಈ ವರ್ಷದಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ 17 ಪಾಕಿಸ್ತಾನಿ ಉಗ್ರರು ಸೇರಿದಂತೆ ಒಟ್ಟು 75 ಉಗ್ರರನ್ನು ಹತ್ಯೆಗೈದಿರುವುದಾಗಿ ವರದಿ ತಿಳಿಸಿದೆ.