Advertisement

ಬ್ಯಾರೇಜ್‌ ಕಾಮಗಾರಿಗೆ ಚಾಲನೆ

06:52 AM May 26, 2020 | Suhan S |

ರಾಯಬಾಗ: ಮತಕ್ಷೇತ್ರದ ಪ್ರತಿಯೊಂದು ಗ್ರಾಮಗಳಲ್ಲಿನ ಹಳ್ಳಗಳಿಗೆ ಬಾಂದಾರಗಳನ್ನು ನಿರ್ಮಿಸುವುದರಿಂದ ಬಾವಿ ಮತ್ತು ಕೊಳವೆ ಬಾವಿಗಳಲ್ಲಿ ಅಂತರ್ಜಲಮಟ್ಟ ಹೆಚ್ಚಿಸಿ, ರೈತರಿಗೆ ಅನುಕೂಲವಾಗಲಿದೆ ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು.

Advertisement

ಸೋಮವಾರ ತಾಲೂಕಿನ ನಂದಿಕುರಳಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಮಂಜೂರಾದ 1.50 ಕೋಟಿ ರೂ. ವೆಚ್ಚದಲ್ಲಿ ಗ್ರಾಮದ ಹಳ್ಳಕ್ಕೆ ಬ್ಯಾರೇಜ್‌ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಕ್ಷೇತ್ರವನ್ನು ಸಂಪೂರ್ಣ ಅಭಿವೃದ್ಧಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಅಥಣಿ ಸಣ್ಣ ನೀರಾವರಿ ಇಲಾಖೆ ಅಭಿಯಂತರ ಎಸ್‌. ಎಸ್‌. ಮಾಕಾಣಿ, ವಿಜಯ ವಸ್ತ್ರದ, ಸದಾಶಿವ ಘೋರ್ಪಡೆ, ಆರ್‌.ಬಿ. ಶಹಾರೆ, ಕಾಡು ಗುಂಡಕಲ್ಲೆ, ಅಮೀತ ಜಾಧವ, ಪೃಥ್ವಿರಾಜ ಜಾಧವ, ಶ್ರವಣ ಕಾಂಬಳೆ, ರಾಮಣ್ಣ ಮಗದುಮ್ಮ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next