Advertisement

ನಾಲ್ಕು ಬಾಲ್ಯ ವಿವಾಹಗಳಿಗೆ ತಡೆ

05:37 AM Jun 13, 2020 | Suhan S |

ಧಾರವಾಡ: ಕೋವಿಡ್ ಲಾಕ್‌ಡೌನ್‌ ಅವಧಿಯೊಳಗಿನ ಮೇ ಹಾಗೂ ಜೂನ್‌ ತಿಂಗಳಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ನಾಲ್ಕು ಬಾಲ್ಯ ವಿವಾಹ ತಪ್ಪಿಸುವಲ್ಲಿ ಯಶಸ್ವಿಯಾಗಿದೆ.

Advertisement

ಮೇ 12ರಂದು ಲೋಕೂರು ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅದೇ ಗ್ರಾಮದ ಯುವಕನೊಂದಿಗೆ, ಜೂ.4 ರಂದು ಗರಗ ಗ್ರಾಮದ ಯುವತಿಯೊಂದಿಗೆ ತಡಕೋಡ ಗ್ರಾಮದ ಅಪ್ರಾಪ್ತ ಚಾಲಕನೊಂದಿಗೆ, ಜೂ.11ರಂದು ಗೌಟನ್‌ ನಾಗಲಾವಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಬೆಳಗಾವಿ ಜಿಲ್ಲೆಯ ವಡಗಾಂವ ಗ್ರಾಮದ ಯುವಕನೊಂದಿಗೆ ಮದುವೆ ಮಾಡಲು ನಿಶ್ಚಯಿಸಲಾಗಿತ್ತು. ಈ ಬಗ್ಗೆ ಮಾಹಿತಿ ಬಂದ ತಕ್ಷಣವೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪೋಷಕರಿಗೆ ಎಚ್ಚರಿಕೆ ನೀಡಿ ಮದುವೆ ನಿಲ್ಲಿಸಲಾಗಿದೆ.

ಜೂ.15ರಂದು ಬೆಳ್ಳಿಗಟ್ಟಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಜಲ್ಲಾಪೂರ ಗ್ರಾಮದ ಯುವಕನೊಂದಿಗೆ ವಿವಾಹ ಮಾಡುತ್ತಿರುವ ಸುದ್ದಿ ತಿಳಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಸ್ಥಳಕ್ಕೆ ಭೇಟಿ ನೀಡಿ ಆ ಮದುವೆಯನ್ನೂ ತಡೆಯುವಲ್ಲಿ ಯಶಸ್ವಿಯಾಗಿದೆ. ಪೋಷಕರಿಗೆ ನೋಟಿಸ್‌ ಜಾರಿ ಮಾಡಿ, ಘಟಕಕ್ಕೆ ಕರೆಸಿ ಪೋಷಕರಿಗೆ ಮುಚ್ಚಳಿಕೆ ಪತ್ರ ಸಹ ಬರೆಯಿಸಿಕೊಳ್ಳಲಾಗಿದೆ ಎಂದು ಘಟಕದ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next