Advertisement

ಬ್ಯಾರಿ ಸಾಹಿತ್ಯ ಅಕಾಡೆಮಿ: ರಹೀಮ್ ಉಚ್ಚಿಲ್ ಕಿತ್ತು ಹಾಕಿದ ಸರಕಾರ

12:27 PM Apr 06, 2022 | Team Udayavani |

ಬೆಂಗಳೂರು: ಬ್ಯಾರಿ ಅಕಾಡೆಮಿ ಅಧ್ಯಕ್ಷ ಸ್ಥಾನದಿಂದ ರಹೀಮ್ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಿ ಸರಕಾರ ಬುಧವಾರ ಆದೇಶ ಹೊರಡಿಸಿದೆ.

Advertisement

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಆರ್.ರಮೇಶ್ ಅವರು ರಹೀಮ್ ಉಚ್ಚಿಲ್ ಅವರನ್ನು ಅಧ್ಯಕ್ಷ ಸ್ಥಾನದಿಂದ ತತ್ ಕ್ಷಣ ದಿಂದ ರದ್ದು ಪಡಿಸಿ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ಮುಖಂಡರಾಗಿದ್ದ ರಹೀಮ್ ಉಚ್ಚಿಲ್ ಅವರು ಎರಡು ಬಾರಿ ಬ್ಯಾರಿ ಅಕಾಡೆಮಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.ಯಾವ ಕಾರಣಕ್ಕಾಗಿ ನನ್ನನ್ನು ತೆಗೆದು ಹಾಕಲಾಗಿದೆ ಎಂದು ತಿಳಿದಿಲ್ಲ ಎಂದು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಿಜಾಬ್ ವಿವಾದ ತೀವ್ರ ಗೊಂಡಿದ್ದ ವೇಳೆ ಸರಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದ ಉಚ್ಚಿಲ್ ಅವರಿಗೆ ಬೆದರಿಕೆ ಕರೆಗಳೂ ಬಂದಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next