Advertisement
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ತಮ್ಮ ಹೋರಾಟ ಬಿಟ್ಟು ನಮ್ಮ ಜತೆ ಕೈಜೋಡಿಸಿ ಎಂದು ವಿಜಯೇಂದ್ರ ವಿನಂತಿ ಮಾಡಿಕೊಂಡರು. ಆದರೂ ಅವರು ಕೇಳಿಲ್ಲ. ಈಗಲಾದರೂ ಅವರು ಜಾಗೃತ ರಾಗಿ ಪಕ್ಷ ಬಲಪಡಿಸಲು ಸಹಕಾರ ಕೊಡ ಬೇಕೆಂದು ನಾನು ವಿನಂತಿ ಮಾಡುತ್ತೇನೆ. ಉಳಿದದ್ದು ಅವರಿಗೆ ಹಾಗೂ ಕೇಂದ್ರದ ನಾಯಕರಿಗೆ ಬಿಟ್ಟದ್ದು ಎಂದು ಪರೋಕ್ಷ ಎಚ್ಚರಿಕೆ ನೀಡಿದರು.
ಇನ್ನೊಂದೆಡೆ, ರಾಜ್ಯಾಧ್ಯಕ್ಷ ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪಕ್ಷದ ಸಂಘಟನ ಪರ್ವ ಕಾರ್ಯಾಗಾರದಲ್ಲಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೂಗು ಕೇಳಿಬಂದಿದೆ. ಅವರ ವಿರುದ್ಧ ಒಂದೋ ಶಿಸ್ತುಕ್ರಮ ತೆಗೆದುಕೊಳ್ಳಿ ಅಥವಾ ಆದಷ್ಟು ಬೇಗ ವಿವಾದ ಸರಿಪಡಿಸಿಕೊಳ್ಳಿ. ಇಲ್ಲವಾದರೆ ನಾವೇ ವರಿಷ್ಠರನ್ನು ಭೇಟಿ ಮಾಡಿ ಈ ಬಗ್ಗೆ ದೂರು ನೀಡಬೇಕಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರೆಲ್ಲರೂ ಆಗ್ರಹಿಸಿದ್ದಾರೆ ಎನ್ನಲಾಗಿದೆ.