Advertisement

ಆಜಾನ್ : ಸುಪ್ರೀಂ ಕೋರ್ಟ್ ಅದೇಶ ಪಾಲನೆಗೆ ಸರ್ಕಾರ ಕ್ರಮ‌ಕೈಗೊಳ್ಳಲಿ‌ : ಯತ್ನಾಳ

03:53 PM May 08, 2022 | Team Udayavani |

ವಿಜಯಪುರ : ಮಸೀದಿಗಳಲ್ಲಿ ಸುಪ್ರೀಂ ಕೋರ್ಟ್ ಆದೇಶ ಮೀರಿ ಅವೈಜ್ಞಾನಿಕ ಪ್ರಮಾಣದ ಧ್ವನಿವರ್ಧಕಗಳಲ್ಲಿ ಆಜಾನ್ ಕೂಗುವುದನ್ನು ಸರ್ಕಾರ ನಿರ್ಬಂಧಿಸಬೇಕು. ಇಲ್ಲವಾದಲ್ಲಿ ಶ್ರೀರಾಮ ಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ಕರೆ ನೀಡಿರುವ ಮಂದಿರಗಳಲ್ಲಿ ಹನುಮಾನ್ ಚಾಲೀಸಾ ಪಠಣ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

Advertisement

ಭಾನುವಾರ ಹಿಟ್ನಳ್ಳಿ ಗ್ರಾಮದಲ್ಲಿ ಕಿತ್ತೂರು ಚನ್ನಮ್ಮ ಪ್ರತಿಮೆ ಅನಾವರಣದ ಸಮಾರಂಭದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೂಡಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಸರ್ಕಾರ ಕೈಗೊಂಡ ಮಾದರಿಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲನೆಗೆ ಮಸೀದಿಗಳಲ್ಲಿ ಆಜಾನ್ ಧ್ವನಿವರ್ಧಕ ನಿಗದಿತ ಡೆಸಿಬಲ್ ಮಿತಿಗೊಳಿಸಲು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯದ ಎಲ್ಲ ಹಿಂದೂ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ, ಭಕ್ತಿಗೀತೆಗಳನ್ನು ಧ್ವನಿವರ್ಧಕ ಮೂಲಕ ಭಜಿಸಲು ನನ್ನ ಸಂಪೂರ್ಣ ಬೆಂಬಲವಿದೆ. ಸರ್ಕಾರದ ನಿರ್ಲಕ್ಷದ ವರ್ತನೆಯೇ ರಾಜ್ಯದಲ್ಲಿ ಸಂಘರ್ಷಕ್ಕೆ ಕಾರಣವಾಗಲಿದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ : ಭಾರತದಿಂದ ಹೊರ ನಡೆದ ಟೆಸ್ಲಾ ತಂಡ : ಎಲಾನ್ ಮಸ್ಕ್ ಕನಸು ಭಗ್ನ?

Advertisement

Udayavani is now on Telegram. Click here to join our channel and stay updated with the latest news.

Next