Advertisement
ಅವರು ಹೆಮ್ಮಾಡಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಕುಮಾರ್ ಬಂಗಾರಪ್ಪ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿ, ಶಿವಮೊಗ್ಗ ಲೋಕಸಭಾ ಅಭ್ಯರ್ಥಿಯಾಗುತ್ತಾರೆ ಅನ್ನು ವುದು ಸುಳ್ಳು ಸುದ್ದಿ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ನಮ್ಮ ಪಕ್ಷದ ಸಂಘಟನೆಯಲ್ಲಿ ತೊಡಗಿಸಿ ಕೊಂಡಿದ್ದಾರೆ. ಕಾಂಗ್ರೆಸ್‌ಗೆ ಅಭ್ಯರ್ಥಿ ಗಳ ಕೊರತೆ ಏನೂ ಇರಲಿಕ್ಕಿಲ್ಲ ಎಂದು ಹೇಳಿದರು.
Related Articles
ಜ. 22ಕ್ಕೆ ದೇಶದ ಕೋಟ್ಯಂತರ ಜನರ ಕನಸು ನನಸಾಗುವ ದಿನ. ಆ ದಿನ ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಅಯೋಧ್ಯೆಗೆ ಈ ಕಡೆಯಿಂದ ನೇರ ರೈಲು ವ್ಯವಸ್ಥೆ ಕಲ್ಪಿಸುವ ಬಗ್ಗೆ ಪ್ರಯತ್ನಿಸಲಾಗುವುದು. ದೇಶದ ಎಲ್ಲ ಕಡೆಯಿಂದಲೂ ರಸ್ತೆ, ವಿಮಾನ, ರೈಲು ಸಂಪರ್ಕ ಕುರಿತಂತೆ ಕೇಂದ್ರ ಸರಕಾರ ಕಾರ್ಯಪ್ರವೃತ್ತವಾಗಲಿದೆ. ಮುಂಬಯಿಗೆ ವಂದೇ ಭಾರತ್ ರೈಲು ಸಂಪರ್ಕಕಕ್ಕೆ ಮುಂದಿನ ಬಾರಿ ಖಂಡಿತ ಪ್ರಯತ್ನಿಸುವೆ. ಸೇನಾಪುರ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆ ಕುರಿತು ಸಂಬಂಧಪಟ್ಟ ಕೇಂದ್ರದ ಅಧಿಕಾರಿಗಳ ಬಳಿಯೂ ಮಾತನಾಡಿದ್ದೇನೆ ಎಂದು ಹೇಳಿದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಜತೆಗಿದ್ದರು.
Advertisement
ಹೆದ್ದಾರಿ ಸಮಸ್ಯೆ ಇತ್ಯರ್ಥಕ್ಕೆ ವಿಶೇಷ ಅನುದಾನಕುಂದಾಪುರ – ಬೈಂದೂರು ಹೆದ್ದಾರಿ ಕಾಮಗಾರಿಯಲ್ಲಿ ಸಾಕಷ್ಟು ಗೊಂದಲಗಳಿವೆ. ಅಲ್ಲಲ್ಲಿ ಮೇಲ್ಸೇತುವೆ, ಬೈಪಾಸ್, ಅಂಡರ್‌ಪಾಸ್ ಹೀಗೆ ಸುಮಾರು 10 ಕಾಮಗಾರಿಗಳ ಬಗ್ಗೆ ವಿಶೇಷ ಅನುದಾನಕ್ಕಾಗಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಭೇಟಿಯಾಗಿ ಕೊಟ್ಟಿದ್ದೇವೆ. ಶಾಸಕರಿಗೂ ಬಂದಂತಹ ಮನವಿಗಳನ್ನು ಇಲಾಖೆಗೆ ಸಲ್ಲಿಸಲಾಗಿದೆ. ಇದಕ್ಕೆ ಪ್ರತ್ಯೇಕ ಅನುದಾನ ನೀಡುವುದಾಗಿ ಸಚಿವರು ಒಪ್ಪಿಕೊಂಡಿದ್ದು, ಆ ಬಗ್ಗೆ ವಿಶ್ವಾಸವಿದೆ ಎಂದ ಸಂಸದ ರಾಘವೇಂದ್ರ, ಹೆದ್ದಾರಿ ಪ್ರಾಧಿಕಾರಕ್ಕೆ 6 ತಿಂಗಳಿಗೊಬ್ಬರು ಯೋಜನಾ ನಿರ್ದೇಶಕರು ಬದಲಾಗುತ್ತಿದ್ದಾರೆ. ಹೀಗೆ ಆದರೆ ಕಾಮಗಾರಿಯನ್ನು ಹೇಗೆ ಕಾರ್ಯ ರೂಪಕ್ಕೆ ತರುವುದು. ಈ ಬಗ್ಗೆ ಸಚಿವ ಗಡ್ಕರಿ ಅವರ ಗಮನಕ್ಕೂ ತರಲಾಗಿದೆ ಎಂದು ಹೇಳಿದರು.