Advertisement
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೀಗ ಪಂಚ ರಾಜ್ಯ ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಸ್ವಲ್ಪ ಹೆಚ್ಚೂ ಕಡಿಮೆ ಆಗಬಹುದು. ಆದರೆ, ಒಟ್ಟಾರೆ ಒಳ್ಳೆಯ ದಿನಗಳು ಬರಲಿವೆ. 2023ರ ಚುನಾವಣೆ ಸಂಬಂಧ ಬಿಜೆಪಿ ಹೈಕಮಾಂಡ್ ಏನೇ ನಿರ್ಣಯ ಕೈಗೊಂಡರೂ ಅದಕ್ಕೆ ನಾವು ಬದ್ಧ ಎಂದರು.
Related Articles
Advertisement
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಆಗದಂತೆ ಮಾಡಿದ್ದು, ಅಲ್ಲದೇ ಉದ್ದೇಶಪೂರ್ವಕವಾಗಿ ಅಧಿವೇಶನವನ್ನು ಕಾಂಗ್ರೆಸ್ ಹಾಳು ಮಾಡಿದೆ. ಸಿದ್ದರಾಮಯ್ಯ ಎಂಟೆಂಟು ತಾಸು ಮಾತನಾಡುತ್ತಾರೆ. ಅವರ ಶಾಸಕರಿಗೂ ಅವಕಾಶ ಕೊಡುವುದಿಲ್ಲ. ಇದು ದೊಡ್ಡ ದುರಂತ. ಸಿದ್ದರಾಮಯ್ಯ ಹೇಳಿದ್ದನ್ನೇ ಹೇಳುತ್ತಾರೆ. ಅದೇ ಟಿಪ್ಪು ಸುಲ್ತಾನ್ ವರ್ಣನೆ ಮಾಡುತ್ತಾರೆ. ಅದು ಬಿಟ್ಟರೆ ಬೇರೆ ಅವರಿಗೆ ಗೊತ್ತಿಲ್ಲ. ಟಿಪ್ಪು ಸುಲ್ತಾನ್ ವರ್ಣನೆಯಲ್ಲೇ ಕಾಂಗ್ರೆಸ್ ಹಾಳಾಗುತ್ತಿದೆ. ಇದೀಗ ಪಾದಯಾತ್ರೆಯಲ್ಲೂ ಅವರೆಲ್ಲರ ಬಣ್ಣ ಬಯಲಾಗುತ್ತಿದ್ದು, ಎಲ್ಲಾ ಚಾನಲ್ನಲ್ಲೂ ಬಣ್ಣ ಬಯಲಾಗುತ್ತಿದೆ ಎಂದರು.
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡಬೇಕೆಂಬುದು ಸಿಎಂ ಬಸವರಾಜ ಬೊಮ್ಮಾಯಿ ಮನಸ್ಸಿನಲ್ಲೂ ಇದೆ. ನಮ್ಮ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕೊಡುವಂತೆ ನಾವು ಕೇಳಿದ್ದೇವೆ. ಯಾರಿಗೂ ಅಂಜಿಕೆ, ಬೆದರಿಕೆ ಹಾಕಿಲ್ಲ. ಮೀಸಲಾತಿ ಕೊಡುವ ದಿಕ್ಕಿನಲ್ಲಿ ಸಿಎಂ ಕೆಲಸ ಮಾಡುತ್ತಿದ್ದು, ಬಜೆಟ್ ಪೂರ್ವದಲ್ಲಿ ನಮ್ಮ ಬೇಡಿಕೆ ಈಡೇರಿಸುವ ಭರವಸೆ ಇದೆ.-ಬಸನಗೌಡ ಪಾಟೀಲ ಯತ್ನಾಳ