ವಿಜಯಪುರ :ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದು, ಪಕ್ಷದ ಹೈಕಮಾಂಡ್ ಬಯಸಿದಲ್ಲಿ ಅವಕಾಶ ಕಲ್ಪಿಸಿದಲ್ಲಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಿಸಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇರವಾಗಿ ತಾವು ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವುದಾಗಿ ಬಹಿರಂಗವಾಗಿ ಹೊರ ಹಾಕಿದ್ದಾರೆ.
ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತರ ಕರ್ನಾಟಕದವರು ಅದರಲ್ಲೂ ವಿಜಯಪುರ ಜಿಲ್ಲೆಯವರು ಮುಖ್ಯಮಂತ್ರಿ ಸ್ಥಾನ ನಿರ್ವಹಸುವಲ್ಲಿ ಸಮರ್ಥರಿದ್ದೇವೆ. ನನ್ನ ಮೇಲೆ ಭೂ ಹಗರಣ, ಭ್ರಷ್ಟಾಚಾರದ ಆರೋಪ ಇಲ್ಲ ಎಂದು ನೇರವಾಗಿ ಮುಖ್ಯಮಂತ್ರಿ ಯಡಿಇಯೂರಪ್ಪ ಅವರ ವಿರುದ್ಧ ಮತ್ತೆ ಹರಿ ಹಾಯ್ದರು.
ನನಗೆ ಮುಖ್ಯಮಂತ್ರಿ ಅವಕಾಶ ನೀಡಿದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಂತೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇನೆ. ಅಲ್ಪಸಂಖ್ಯಾತ ತುಷ್ಟೀಕರಣ ಇಲ್ಲದ ಹಾಗೂ ಗೂಂಡಾ ರಾಜ್ಯವನ್ನು ಮುಕ್ತ ಮಾಡಿ ಮಾದರಿ ಸರ್ಕಾರ ನೀಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ತರುವ ಕೆಲಸ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ : ನಟಿ ಊರ್ವಶಿಗೆ ಮರೆತು ಹೋಯಿತೆ ರಿಷಭ್ ಪಂತ್ ಹೆಸರು ?
ಏ.17 ರಂದು ನಡೆಯಲಿರುವ ಉಪ ಚುನಾವಣೆಯ ಮತದಾನ ಮುಗಿಯಲಿದೆ. ಆ ಬಳಿಕ ರಾಜ್ಯ ರಾಜಕಾರಣದ ಕುರಿತು ಏ.18 ರಂದು ಭವಿಷ್ಯ ಹೇಳುತ್ತೇನೆ ಎಂದ ಯತ್ನಾಳ, ಉಪ ಚುನಾವಣೆಯಲ್ಲಿ ನನ್ನನ್ನು ಪ್ರಚಾರಕ್ಕೆ ಆಹ್ವಾನಿಸಿರಲಿಲ್ಲ. ಆದರೂ ಬೆಳಗಾವಿ ಜಿಲ್ಲೆಯಲ್ಲಿ ಪ್ರಚಾರ ನಡೆಸಿದ್ದು, ನಾನು ಪ್ರಚಾರ ನಡೆಸಿದ ಬಳಿಕ ಬಿಜೆಪಿ ಅಭ್ಯರ್ಥಿ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದ್ದು, ಗೆಲುವು ಸುಲೌಭವಾಗಿದೆ ಎಂದು ಅಲ್ಲಿ ಪ್ರಚಾರದಲ್ಲಿರುವ ನಾಯಕರು ತಿಳಿಸಿದ್ದಾರೆ ಎಂದು ಶಾಸಕ ಯತ್ನಾಳ ವಿವರಿಸಿದರು.