Advertisement

20ಕ್ಕೆ ಬಯಲು ರಂಗ ಮಂದಿರದಲ್ಲಿ ಬಸವ ಜಯಂತಿ

03:56 PM Jun 19, 2022 | Team Udayavani |

ಕೆ.ಆರ್‌.ನಗರ: ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕ ಮತ್ತು ವೀರಶೈವ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ಪಟ್ಟಣದ ಪುರಸಭೆ ಬಯಲು ರಂಗ ಮಂದಿರದಲ್ಲಿ ಬಸವ ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದು ವೀರಶೈವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಲ್‌.ಪಿ.ರವಿಕುಮಾರ್‌ ಹೇಳಿದರು.

Advertisement

ಇಲ್ಲಿನ ಬಸವೇಶ್ವರ ಬಡಾವಣೆಯ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಬಸವ ಜಯಂತಿ ಪ್ರಚಾರ ವಾಹನಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ಇದರ ಜತೆಗೆ ಕಾಯಕ ಯೋಗಿ ಡಾ.ಶಿವಕುಮಾರಸ್ವಾಮಿಗಳ 115ನೇ ಜಯಂತ್ಯುತ್ಸವ ಮತ್ತು ಬಸವ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈಶ್ವರಖಂಡ್ರೆ ಅನಾವರಣ: ಸೋಮವಾರ ಬೆಳಗ್ಗೆ 8 ಗಂಟೆಗೆ ಮಲೆಮಹದೇಶ್ವರಸ್ವಾಮಿ ದೇವಾಲಯದಿಂದ ಬಸವೇಶ್ವರರ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, 10 ಗಂಟೆಗೆ ಬಸವೇಶ್ವರ ದೇವಾಲಯದ ಮುಂದೆ ನಿರ್ಮಾಣ ಮಾಡಿರುವ ಬಸವ ಪುತ್ಥಳಿಯನ್ನು ಆಖೀಲ ಭಾರತ ವೀರಶೈವ ಮಹಾಸಭಾದ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರಖಂಡ್ರೆ ಅನಾವರಣ ಮಾಡಲಿದ್ದಾರೆಂ¨ಶೈವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರು ಮಾಹಿತಿ ನೀಡಿದರು.

ವಿವಿಧ ಮಠಾಧೀಶರು ಭಾಗಿ: ನಂತರ ಬೆಳಗ್ಗೆ 10.30ಕ್ಕೆ ಪುರಸಭೆ ಬಯಲು ರಂಗ ಮಂದಿರದ ಆವರಣದಲ್ಲಿ ನಡೆಯುವ ಬಸವ ಜಯಂತಿ ಮತ್ತು ಡಾ.ಶಿವಕುಮಾರ ಸ್ವಾಮೀಜಿಗಳ ಜಯಂತ್ಯುತ್ಸವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಸುತ್ತೂರು ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಮತ್ತು ಸಿದ್ಧಗಂಗಾ ಮಠಾಧೀಶರಾದ ಸಿದ್ದಲಿಂಗಮಹಾ ಸ್ವಾಮಿಗಳು ವಹಿಸಲಿದ್ದು, ಜತೆಗೆ ವಿವಿಧ ಮಠಾಧೀಶರು ಭಾಗವಹಿಸುವರು ಎಂದು ತಿಳಿಸಿದರು.

ಸಾಧಕರಿಗೆ ಸನ್ಮಾನ: ಕಾರ್ಯಕ್ರಮದ ಉದ್ಘಾಟನೆಯನ್ನು ಬೃಹತ್‌ ಕೈಗಾರಿಕೆ ಸಚಿವ ಮುರುಗೇಶ್‌ನಿರಾಣಿ ನೆರವೇರಿಸಲಿದ್ದು, ಬಸವಣ್ಣನವರು ಮತ್ತು ಡಾ. ಶಿವಕುಮಾರಸ್ವಾಮೀಜಿಗಳ ಭಾವಚಿತ್ರಗಳಿಗೆ ಶಾಸಕ ಸಾ. ರಾ.ಮಹೇಶ್‌ ಪುಷ್ಪಾರ್ಚನೆ ಮಾಡಲಿದ್ದಾರೆ.

Advertisement

ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಾಧಕರಿಗೆ ಸನ್ಮಾನ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತ ಅಂಬರೀಶ್‌, ವಿಧಾನ ಪರಿಷತ್‌ ಸದಸ್ಯ ಅಡಗೂರುಎಚ್‌.ವಿಶ್ವನಾಥ್‌, ಮಾಜಿ ಸದಸ್ಯ ಬಿ.ಎಸ್‌. ತೋಂಟದಾರ್ಯ, ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಸುನಂದಪಾಲನೇತ್ರ, ಪುರಸಭೆ ಅಧ್ಯಕ್ಷ ಕೋಳಿ ಪ್ರಕಾಶ್‌, ಜಿಪಂ ಮಾಜಿ ಸದಸ್ಯ ಡಿ.ರವಿಶಂಕರ್‌, ಜಿಪಂ ಮಾಜಿ ಉಪಾಧ್ಯಕ್ಷ ಎ.ಎಸ್‌.ಚನ್ನಬಸಪ್ಪ, ಜಿಲ್ಲಾ ವೀರಶೈವ ಮಹಾಸಭಾದ ಅಧ್ಯಕ್ಷ ಕಾನ್ಯಶಿವಮೂರ್ತಿ, ತಾಲೂಕು ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಿ.ಪಿ.ರಮೇಶ್‌ ಕುಮಾರ್‌, ತಾಲೂಕು ವೀರಶೈವ ಮಹಾಸಭಾದ ಅಧ್ಯಕ್ಷ ಕೆಂಪರಾಜು ಭಾಗವಹಿಸುವರು ಎಂದು ತಿಳಿಸಿದರು.

ತಾಲೂಕು ವೀರಶೈವ ಮಹಾಸಭಾದ ಅಧ್ಯಕ್ಷ ಕೆಂಪರಾಜು, ಮಹಿಳಾ ಘಟಕದ ಅಧ್ಯಕ್ಷೆ ಮನೋಹರಿ, ವೀರಶೈವ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರಾಜಶೇಖರ ಮತ್ತು ವೀರಶೈವ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next