Advertisement

ಜಿಲ್ಲಾದ್ಯಂತ ಬಸವ ಜಯಂತಿ ಸಂಭ್ರಮ

12:28 PM May 08, 2019 | Team Udayavani |

ಗದಗ: ಅವಳಿ ನಗರ ಸೇರಿದಂತೆ ಜಿಲ್ಲಾದ್ಯಂತ ಸರ್ಕಾರಿ ಕಚೇರಿ, ಶಾಲಾ-ಕಾಲೇಜ್‌ ಹಾಗೂ ಸಂಘ-ಸಂಸ್ಥೆಗಳಲ್ಲಿ ಮಂಗಳವಾರ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಿಸಲಾಯಿತು.

Advertisement

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ಪೂಜೆ ಸಲ್ಲಿಸಿದರು. ತಹಶೀಲ್ದಾರ್‌ ಶ್ರೀನಿವಾಸಮೂರ್ತಿ ಕುಲಕರ್ಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಅರ್ಜುನ ಗೊಳಸಂಗಿ, ಬಸವ ಕೇಂದ್ರದ ಅಧ್ಯಕ್ಷ ಕೆ.ಸಿ. ಚೆಟ್ಟಿ, ಡಾ| ಜಿ.ಬಿ.ಪಾಟೀಲ, ವೀರಣ್ಣ ಮುದಗಲ್ಲ, ಶೇಖಣ್ಣ ಕವಳಿಕಾಯಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು

Advertisement

Udayavani is now on Telegram. Click here to join our channel and stay updated with the latest news.

Next