Advertisement

ಭೀಮಣ್ಣ ಖಂಡ್ರೆಗೆ ಬಸವ ಭೂಷಣ ಪ್ರಶಸ್ತಿ

11:22 PM May 01, 2019 | Lakshmi GovindaRaj |

ಬೆಂಗಳೂರು: ದುಬೈ ಬಸವ ಸಮಿತಿ ವತಿಯಿಂದ ಪ್ರತಿ ವರ್ಷ ನೀಡುವ ಪ್ರತಿಷ್ಠಿತ ಬಸವಭೂಷಣ ಪ್ರಶಸ್ತಿಯನ್ನು ಮಾಜಿ ಸಚಿವ ಹಾಗೂ ಅಖೀಲ ಭಾರತ ವೀರಶೈವ ಮಹಾಸಭೆಯ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ ಅವರಿಗೆ ನೀಡಲಾಗಿದೆ.

Advertisement

ಈ ಕುರಿತು ದುಬೈ ಬಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಲಿಂಗದಳ್ಳಿ ಪತ್ರಿಕಾ ಪ್ರಕಟಣೆ ನೀಡಿದ್ದು, ಸಮಾಜದಲ್ಲಿ ಶೈಕ್ಷಣಿಕ ಹಾಗೂ ಸಾಮಾಜಿಕ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ಇಳಿವಯಸ್ಸಿನಲ್ಲಿಯೂ ಸಮಾಜದ ಏಳಿಗೆಗಾಗಿ ನಿರಂತರ ಸೇವೆ ಸಲ್ಲಿಸುತ್ತಿರುವ ಬಸವಾನುಯಾಯಿಯಾಗಿ ಶರಣರ ತತ್ವಗಳನ್ನು ಪಾಲಿಸಿಕೊಂಡು ಬರುತ್ತಿರುವ ಹಿರಿಯ ಜೀವಿಗಳಾದ ಭೀಮಣ್ಣ ಖಂಡ್ರೆ ಅವರ ಸಮಾಜ ಸೇವೆಯನ್ನು ಪರಿಗಣಿಸಿ ಈ ವರ್ಷದ ಬಸವ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಮೇ 3ರಂದು ದುಬೈನ ಜೆಎಸ್‌ಎಸ್‌ ಇಂಟರ್‌ ನ್ಯಾಷನಲ್ ಪ್ರೈವೇಟ್‌ ಸ್ಕೂಲ್ನಲ್ಲಿ ನಡೆಯುವ ವಿಶ್ವ ಗುರು ಬಸವಣ್ಣನವರ 886ನೇ ಜಯಂತಿ ಕಾರ್ಯಕ್ರಮದ ಸಮಾರಂಭದಲ್ಲಿ ಭೀಮಣ್ಣ ಖಂಡ್ರೆ ಅವರಿಗೆ ಬಸವ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.

ಆನಂದಪುರ ಮುರುಘಾ ಮಠದ ಡಾ.ಮಲ್ಲಿಕಾರ್ಜುನ ಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಜಡೆ ಸಂಸ್ಥಾನ ಮಠದ ಡಾ.ಮಹಾಂತ ಸ್ವಾಮೀಜಿ, ಶಿವಮೊಗ್ಗ ಬಸವ ಕೇಂದ್ರದ ಬಸವ ಮರುಳ ಸಿದ್ದ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ.

ಜಿ ಕನ್ನಡ ಸರಿಗಮಪ ಕಾರ್ಯಕ್ರಮ ವಿನ್ನರ್‌ ಚೆನ್ನಪ್ಪ ಹುದ್ದಾರ್‌ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದು, ಮಾತನಾಡಿಸುವ ಗೊಂಬೆ ಖ್ಯಾತಿಯ ಸುಮಾ ರಾಜಕುಮಾರ್‌ ಕಾರ್ಯಕ್ರಮ ನಡೆಸಿ ಕೊಡಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next