Advertisement

ಸಮಾನತೆ ಜೊತೆಗೆ ಕಾಯಕದ ಸಂದೇಶ ನೀಡಿದ ಬಸವಣ್ಣ

04:44 PM Apr 27, 2020 | Suhan S |

ಬೆಳಗಾವಿ:  ಕೋವಿಡ್ 19 ವೈರಸ್‌ ಹಾವಳಿಯನ್ನು ತಡೆಗಟ್ಟಲು ಎಲ್ಲ ಕಡೆ ಲಾಕ್‌ ಡೌನ್‌ ಆದೇಶ ಜಾರಿಯಲ್ಲಿರುವದರಿಂದ ಜಿಲ್ಲೆಯಲ್ಲಿ ಭಾನುವಾರ ಬಸವೇಶ್ವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

Advertisement

ಬಸವೇಶ್ವರ ಜಯಂತಿ ಅಂಗವಾಗಿ ಬೆಳಗಾವಿ ಜಿಲ್ಲಾಡಳಿತ ವತಿಯಿಂದ ನಗರದ ಗೋವಾವೇಸ್‌ ನಲ್ಲಿರುವ ಬಸವೇಶ್ವರ ಉದ್ಯಾನದಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಕೇಂದ್ರ ರೈಲ್ವೆ ಸಚಿವ ಸುರೇಶ್‌ ಅಂಗಡಿ, ಆರೋಗ್ಯದ ದೃಷ್ಟಿಯಿಂದ ಎಲ್ಲರೂ ಮನೆಯಲ್ಲಿ ಇರುವ ಮೂಲಕ ಕೋವಿಡ್‌-19 ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಇಡೀ ಜಗತ್ತಿಗೆ ಮೊದಲ ಬಾರಿಗೆ ತಮ್ಮ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಕೊಟ್ಟ ಮಹಾನ್‌ ವ್ಯಕ್ತಿ ಬಸವಣ್ಣನವರು. ಸಮಾನತೆ ಜೊತೆಗೆ ಕಾಯಕವೇ ಕೈಲಾಸ ಸಂದೇಶ ನೀಡಿದರು. ಜಾತಿ, ವರ್ಗ ಹಾಗೂ ವರ್ಣರಹಿತ ಸಮಾಜ ಕಟ್ಟಿದರು. ಅವರ ಆದರ್ಶಗಳನ್ನು ನಾವು ಪ್ರತಿಯೊಬ್ಬರೂ ಪಾಲಿಸಬೇಕು ಎಂದರು. ಶಾಸಕ ಅನಿಲ ಬೆನಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಘೂಳಪ್ಪ ಹೊಸಮನಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್‌ ಕೆ.ಎಚ್‌., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಲಿಂಗಾಯತ ಸಮಾಜದ ಮುಖಂಡರಾದ ರಮೇಶ್‌ ಕಳಸಣ್ಣವರ, ರತ್ನಪ್ರಭಾ ಬೆಲ್ಲದ, ಜ್ಯೋತಿ ಭಾವಿಕಟ್ಟಿ, ಸೋಮಲಿಂಗ ಮಾವಿನಕಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಹುಕ್ಕೇರಿ ಮಠದಲ್ಲಿ: ನಗರದ ಲಕ್ಷ್ಮಿ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠ ಶಾಖಾ ಮಠದಲ್ಲಿ ಜಗಜ್ಯೊತಿ ಬಸವೇಶ್ವರರ ಜಯಂತಿಯನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಕೋವಿಡ್ 19 ವೈರಸ್‌ ಹಾವಳಿಯಿಂದ ಸಂಕಷ್ಟದಲ್ಲಿರುವ ಬಡ ವರ್ಗದವರಿಗೆ ಆಹಾರ ಧಾನ್ಯದ ಕಿಟ್‌ಗಳನ್ನು ವಿತರಿಸಲಾಯಿತು. ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ನೀರಲಗಿಮಠ, ಡಾ ನಂದೇಶ್ವರ ಆನಂದ ಹುಲಮನಿ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next