Advertisement

ಬಸವಣ್ಣನವರ ವಚನಗಳು ಸಾರ್ವಕಾಲಿಕ : ಜಿಲ್ಲಾಧಿಕಾರಿ

12:29 AM May 09, 2019 | Team Udayavani |

ಮಡಿಕೇರಿ :ಜಿಲ್ಲಾಡಳಿತ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಮಂಗಳವಾರ ಭಕ್ತಿ ಭಂಡಾರಿ ಬಸವಣ್ಣನವರ ಜಯಂತ್ಯುತ್ಸವ ನಡೆಯಿತು. ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಮನ್‌ ಡಿ.ಪೆನ್ನೇಕರ್‌, ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ, ಉಪ ಭಾಗಾಧಿಕಾರಿ ಟಿ.ಜವರೇಗೌಡ, ಎಸ್‌.ಮಹೇಶ್‌ ಅವರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಮಾತನಾಡಿ ಭಕ್ತಿ ಭಂಡಾರಿ ಬಸವಣ್ಣ ಅವರು ಸಾಮಾಜಿಕ ಸಮಾನತೆಗಾಗಿ ಶ್ರುಸಿದ್ದಾರೆ. ಇವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳುವಂತಾಗಬೇಕು ಎಂದು ಕರೆ ನೀಡಿದರು.

Advertisement

ಬಸವಣ್ಣನವರ ಚಿಂತನೆಗಳು, ವಚನಗಳನ್ನು ಎಲ್ಲರೂ ಅಧ್ಯಯನ ಮಾಡುವಂತಾಗಬೇಕು. ಬಸವಣ್ಣನವರ ವಚನಗಳು ಸಾರ್ವಕಾಲಿಕವಾಗಿದ್ದು, ಬಸವಣ್ಣನವರ ವಚನಗಳಿಂದ ಸಮಾಜದಲ್ಲಿ ಸಮಾನತೆ ಕಾಣಬಹುದು ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್‌ ಅವರು ಸ್ವಾಗತಿಸಿದರು. ವಿರಾಜಪೇಟೆ ತಾಲ್ಲೂಕು ತಹಶೀಲ್ದಾರ್‌ ಕಚೇರಿಯಲ್ಲಿ ಬಸವೇಶ್ವರ ಜಯಂತಿ ಉತ್ಸವ ನಡೆುತು. ತಹಶೀಲ್ದಾರ್‌ ಗೋಂದರಾಜು ‌ ನಮನ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next