Advertisement

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೌಕರ್ಯ

05:43 PM Jun 24, 2020 | Naveen |

ಬಸವಕಲ್ಯಾಣ: ಜೂ.25ರಿಂದ ಜು.4ರವರೆಗೆ ತಾಲೂಕಿನ 19 ಕೇಂದ್ರ ಹಾಗೂ 5 ಉಪಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜೆ.ಹಳ್ಳದ ತಿಳಿಸಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸರ್ಕಾರದ ಆದೇಶದ ಪ್ರಕಾರ ಎಲ್ಲ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ, ಸ್ಯಾನಿಟೈಸರ್‌ ಮತ್ತು ಥರ್ಮಲ್‌ ಸ್ಕ್ರೀನಿಂಗ್‌ ನಡೆಸಲಾಗುತ್ತದೆ. ಪರೀಕ್ಷೆ ಕೇಂದ್ರಗಳಲ್ಲಿ ಇಬ್ಬರು ದೈಹಿಕ ಶಿಕ್ಷಕರು, ಇಬ್ಬರು ಸ್ಕೌಟ್ಸ್‌ ಮತ್ತು ಗೈಡ್ಸ್‌ ಸ್ವಯಂ ಸೇವಕರು ಹಾಗೂ 5 ಜನ ಶಿಕ್ಷಕರು ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

ಮಕ್ಕಳ ಅನೂಕುಲಕ್ಕಾಗಿ ಕೆಎಸ್‌ಆರ್‌ಟಿಸಿಯಿಂದ ಉಚಿತ ಬಸ್‌ ಸೌಲಭ್ಯ ಕಲ್ಪಿಸಲಾಗಿದೆ. ಯಾವ ಊರಿಗೆ ಸೌಕರ್ಯ ಇರುವುದಿಲ್ಲವೊ ಅಂಥಹ ಕಡೆ ಖಾಸಗಿ ಶಿಕ್ಷಣ ಸಂಸ್ಥೆಗಳ ಬಸ್‌ಗಳನ್ನು ಬಳಸಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷೆ ನಿಗದಿ ಪಡಿಸಿದ ಸಮಯಕ್ಕಿಂತ 2 ತಾಸು ಮುಂಚೆ ಕೇಂದ್ರಕ್ಕೆ ಹಾಜರಾಗಬೇಕು. ಸಾಮಾಜಿಕ ಅಂತರ ಪಾಲನೆ ದೃಷ್ಟಿಯಿಂದ ವಿದ್ಯಾರ್ಥಿಗಳ ಜತೆ ಪೋಷಕರು ಬರಬಾರದು ಎಂದು ಅವರು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next