Advertisement

ಬಸವಕಲ್ಯಾಣ : ಬೆಳಿಗ್ಗೆ 9 ರವರೆಗೆ ಶೇ. 19.48ರಷ್ಟು ಮತದಾನ

11:49 AM Apr 17, 2021 | Team Udayavani |

ಬೀದರ: ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಹಿನ್ನಲೆ ಶನಿವಾರ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುತ್ತಿದ್ದು, ಬೆಳಿಗ್ಗೆ 7 ರಿಂದ 11 ಗಂಟೆವರೆಗೆ ಶೇ.19.48 ರಷ್ಟು ಮತದಾನ ದಾಖಲಾಗಿದೆ.

Advertisement

ಹೆಚ್ಚುವರಿ 62 ಮತಗಟ್ಟೆಗಳು ಸೇರಿದಂತೆ ಒಟ್ಟು 326 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 326 ಮತಗಟ್ಟೆಗಳ ಪೈಕಿ 95 ಸೂಕ್ಷ್ಮ ಮತಗಟ್ಟೆಗಳೆಂದು ಮತ್ತು 231 ಮತಗಟ್ಟೆಗಳು ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ. 1,14,794 ಮಹಿಳಾ ಮತದಾರರು, 1,24,984 ಪುರುಷ ಮತದಾರರು ಮತ್ತು ಇತರೇ ನಾಲ್ಕು ಜನರು ಸೇರಿ ಒಟ್ಟು 2,39,782 ಮತದಾರರು ಇದ್ದಾರೆ.

ನಾಮಪತ್ರಗಳನ್ನು ಸಲ್ಲಿಸಿದ 14 ಅಭ್ಯರ್ಥಿಗಳ ಪೈಕಿ ಇಬ್ಬರು ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದುಕೊಂಡಿದ್ದು ಅಂತಿಮವಾಗಿ ಕಣದಲ್ಲಿ 12 ಜನ ಅಭ್ಯರ್ಥಿಗಳಿದ್ದಾರೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಕರ್ನಾಟಕ ರಾಷ್ಟ್ರ ಸಮಿತಿ, ಶಿವಸೇನಾ, ಹಿಂದೂಸ್ತಾನ ಜನತಾ ಪಾರ್ಟಿ, ಎಂಐಎಂ, ಅಖಿಲ ಭಾರತೀಯ ಮುಸ್ಲಿಂ ಲಿಗ್ (ಸೆಕ್ಯೂಲರ್) ಪಕ್ಷಗಳಿಂದ ಮತ್ತು ಸ್ವತಂತ್ರ ಅಭ್ಯರ್ಥಿಗಳಾಗಿ ನಾಲ್ವರು ಸೇರಿ ಒಟ್ಟು 12 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next