Advertisement

‘ಚೌಡಯ್ಯ ಪೀಠಕ್ಕೆ 50 ಕೋಟಿ ನೀಡುವಂತೆ ಕೋರುವೆ’

05:08 PM Jan 24, 2020 | Naveen |

ಬಸವಕಲ್ಯಾಣ: ನಿಜ ಶರಣ ಅಂಬಿಗರ ಚೌಡಯ್ಯ ಪೀಠಕ್ಕೆ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಬಿಎಸ್‌ವೈ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಶಾಸಕ ಬಿ.ನಾರಾಯಣರಾವ್‌ ಹೇಳಿದರು.

Advertisement

ನಗರದ ಬಿಕೆಡಿಬಿ ಕಲ್ಯಾಣ ಮಂಟಪದಲ್ಲಿ ಗುರುವಾರ ತಾಲೂಕು ಆಡಳಿತದಿಂದ ನಡೆದ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಂಬಿಗರ ಚೌಡಯ್ಯ ಪೀಠಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಆರಂಭಿಸಿದ್ದರು. ಇಗ ಬಿಎಸ್‌ವೈ 10 ಕೋಟಿ ರೂ. ಅನುದಾನ ನೀಡಿದ್ದು, ಮುಂದಿನ ದಿನಗಳಲ್ಲಿ ಪೀಠದ ಸಮಗ್ರ ಅಭಿವೃದ್ಧಿಗಾಗಿ 50 ಕೋಟಿ ರೂ. ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದರು.

ಅಂಬಿಗರ ಚೌಡಯ್ಯ ಸಮಾಜ ಬಾಂಧವರಿಗೆ ನಗರದಲ್ಲಿ ಸ್ಮಶಾನ ಭೂಮಿ ಇಲ್ಲ. ಹೀಗಾಗಿ 5 ಎಕರೆ ಸರ್ಕಾರಿ ಜಮೀನು ಗುರುತಿಸಿ ಸ್ಮಶಾನ ಭೂಮಿಗೆ ನೀಡುವಂತೆ ಜಿಲ್ಲಾಧಿಕಾರಿಗೆ ಪತ್ರ ಬರೆಯಬೇಕೆಂದು ತಹಶೀಲ್ದಾರ್‌ ಸಾವಿತ್ರಿ ಶರಣು ಸಲಗರ ಅವರಿಗೆ ತಿಳಿಸಿದರು.

ಕಲ್ಯಾಣ ಮಂಟಪ ನಿರ್ಮಾಣಕ್ಕಾಗಿ 5 ಕೋಟಿ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದರು. ಶಿಕ್ಷಕ ಗೋವಿಂದ ಚಟ್ಟಂಪಳ್ಳಿ ವಿಶೇಷ ಉಪನ್ಯಾಸ ನೀಡಿದರು. ಇದಕ್ಕೂ ಮುನ್ನ ನಗರದ ಕೋಟೆ ಯಿಂದ ಬಿಕೆಡಿಬಿ ಕಲ್ಯಾಣ ಮಂಟಪದ ವರೆಗೆ ನಿಜ ಶರಣ ಅಂಬಿಗರ ಚೌಡಯ್ಯ ಅವರ ಭಾವಚಿತ್ರ ಮೆರವಣಿಗೆ ನಡೆಯಿತು. ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೊಡ, ತಹಶೀಲ್ದಾರ್‌ ಸಾವಿತ್ರಿ ಶರಣು ಸಲಗರ, ಸಿಎಂಸಿ ಪೌರಾಯುಕ್ತ ಸುರೇಶ ಬಬಲಾದ ಸೇರಿದಂತೆ ಸಮಾಜ ಬಾಂಧವರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next