Advertisement

ಗ್ರಾಮ ಮಟ್ಟದಿಂದ ಪಕ್ಷ ಸಂಘಟನೆಗೆ ಶ್ರಮಿಸಿ

05:24 PM Nov 15, 2019 | Naveen |

ಬಸವಕಲ್ಯಾಣ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರು ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, “ಸಬಕಾ ಸಾಥ್‌ ಸಬಕಾ ವಿಕಾಸ್‌’ ಎಂಬ ವಾಕ್ಯದೊಂದಿಗೆ ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಹೇಳಿದರು.

Advertisement

ನಗರದ ಅಡತ್‌ ಬಜಾರ್‌ನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಬಿಜೆಪಿಗೆ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇಶದಲ್ಲಿ ಬಿಜೆಪಿ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಇಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳನ್ನು ಬಿಟ್ಟು ಸಾಕಷ್ಟು ಜನ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ. ಹೀಗಾಗಿ ದೇಶದಲ್ಲಿ ಇನ್ನೂ ಬಿಜೆಪಿಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಿಂದ ಹೆಚ್ಚು ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಬಿಜೆಪಿ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಸಲಹೆ ನೀಡಿದರು.

ಬಿಜೆಪಿ ಕಾರ್ಯರ್ತರಲ್ಲಿ ಯಾವುದೇ ಭಿನ್ನಾಭಿಪ್ರಾಯ ಬೇಡ. ಎಲ್ಲರು ನಮ್ಮವರೇ ಎಂದು ತಿಳಿದುಕೊಂಡಾಗ ಮಾತ್ರ ಪಕ್ಷ ಬೆಳೆಯಲು ಸಾಧ್ಯವಾಗುತ್ತದೆ. ಅಲ್ಲದೆ ಪಕ್ಷದಲ್ಲಿ ಯಾರು ಪ್ರಾಮಾಣಿಕತೆಯಿಂದ ದುಡಿಯುತ್ತಿದ್ದಾರೊ ಅಂಥವರಿಗೆ ಮಾತ್ರ ಪಕ್ಷದಲ್ಲಿ ಮತ್ತು ಚುನಾವಣೆಯಲ್ಲಿ ಅವಕಾಶ ಸಿಗಬೇಕು ಎಂದರು.

ನಮ್ಮ ತಾಲೂಕಿನಲ್ಲಿ ಬಿಜೆಪಿಗೆ ಹೆಚ್ಚಿನ ಬಲ ತುಂಬೇಕಾಗಿದೆ. ಅದಕ್ಕಾಗಿ ನಾವು ಸಿದ್ಧರಿದ್ದೇವೆ. ರಾಜ್ಯದ ಕೆಲವು ತಾಲೂಕುಗಳಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಗೆಲುವು ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ದೀಪಕ ಗಾಯಕವಾಡ, ಮಾತನಾಡಿ, ಕ್ಷೇತ್ರದಲ್ಲಿ ನಿರಂತರವಾಗಿ ಪಕ್ಷದ ಚಟುವಟಿಕೆಗಳನ್ನು ನಡೆಸುವುದು ತುಂಬಾ ಅವಶ್ಯವಾಗಿದೆ. ಅದಕ್ಕಾಗಿ
ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಅದರ ಮುಂದಾಳತ್ವ ವಹಿಸಿ ಕೆಲಸ ಮಾಡಬೇಕು ಎಂದರು.

ನಂತರ ಶಿವಕುಮಾರ ಬಿರಾದಾರ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷ ಶೋಭಾ ತೆಲಂಗ ಮಾತನಾಡಿದರು. ಬಿಜೆಪಿ ಗ್ರಾಮೀಣ ತಾಲೂಕು ಅಧ್ಯಕ್ಷ ವೀರಣ್ಣ ಹಲಗೆ ನಗರ ಘಟಕ ಅಧ್ಯಕ್ಷ ಶಿವಪುತ್ರ ಗೌರ, ಅರವಿಂದ ಮುತ್ತೆ, ಕಾಳಿದಾಸ ಜಾಧವ, ಅಶೋಕ ವಕಾರೆ, ಪ್ರಕಾಶ ಮೆಂಡೋಳೆ, ನಗರಸಭೆ ಸದಸ್ಯೆ ಲಲಿತಾಬಾಯಿ ಡಾಂಗೆ, ಮಹಿಳಾ ಮೋರ್ಚಾ ಘಟಕ ಅಧ್ಯಕ್ಷ ಮಹದೇವಿ ಬ್ಯಾಡಗೆ, ಕೃಷ್ಣಾರಡ್ಡಿ, ನಗರ ಪ್ರದಾನ ಕಾರ್ಯದರ್ಶಿ ರವಿ ಸ್ವಾಮಿ, ಸಂಜು ಗಾಯಕವಾಡ, ಸುಧಾಕರ ಮದನೆ, ಕರೀಮಸಾಬ, ದಿಗಂಬರ ಜಲದೆ, ಸಂಜು ಗೋಡಭೋಲೆ, ಅರ್ಜುಸಿಂಗ್‌ ರಾಜಪೂತ ಮತ್ತಿತರರು ಇದ್ದರು. ಬಸವರಾಜ ಸ್ವಾಮಿ ನಿರೂಪಿಸಿ, ವಂದಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next