ಬಸವಕಲ್ಯಾಣ: ನಗರದ ಐತಿಹಾಸಿಕ ಕೋಟೆಯ ಸ್ವಚ್ಛತಾ ಅಭಿಯಾನವು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅಧ್ಯಕ್ಷತೆಯಲ್ಲಿ ಕೋಟೆಯಲ್ಲಿ ಮೂರನೇ ಸುತ್ತಿನ (3.0) ಸ್ವತ್ಛತಾ ಅಭಿಯಾನ ಜರುಗಿತು.
ಬೆಳಗ್ಗೆ 7ಕ್ಕೆ ಆರಂಭಗೊಂಡ ಸ್ವಚ್ಛತಾ ಅಭಿಯಾನವು 11:30ರ ವರೆಗೆ ನಡೆಯಿತು. ಕೋಟೆಯ ಸ್ವಚ್ಛತಾ ಅಭಿಯಾನದ ಅಂಗವಾಗಿ ಬುಧವಾರ ಮೂರನೇ ಸುತ್ತಿನ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ತಾಲೂಕು ಮಟ್ಟದ ಸರಕಾರಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಈ ಹಿಂದೆ ಕಳೆದ ಜು.3ರಂದು ಮೊದಲ ಹಂತ ಹಾಗೂ ಜು.17ರಂದು ಎರಡನೇ ಹಂತದ ಕೋಟೆಯ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಬುಧವಾರ ಮೂರನೇ ಹಂತದ ಸ್ವಚ್ಛತಾ ಅಭಿಯಾನವು ಯಶಸ್ವಿಯಾಗಿ ನಡೆಯಿತು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿ ಕೋಟೆಯ ಸ್ವಚ್ಛತಾ ಕಾರ್ಯಕ್ಕೆ ಒಟ್ಟು 12 ತಂಡಗಳನ್ನು ರಚಿಸಲಾಗಿದ್ದು, ಆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ವಹಿಸಲಾಗಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದರು.
ಶಾಸಕ ಶರಣು ಸಲಗರ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ ಬಾಬು ಅವರು ಸ್ವಚ್ಛತೆ ಮಾಡಿದ ಸ್ಥಳಕ್ಕೆ ತೆರಳಿ ಮೆಚ್ಚುಗೆ ವ್ಯಕ್ತಪಡಿಸುವುದರ ಜೊತೆಗೆ ಅವರನ್ನು ಹುರಿದುಂಬಿಸಿದರು. ಆ.15ರೊಳಗಾಗಿ ಇನ್ನೊಮ್ಮೆ ಸ್ವಚ್ಛತಾ ಕಾರ್ಯ ನಡೆಯಲಿದೆ.
ಈ ಸಂದಭದಲ್ಲಿ ಬಸವಕಲ್ಯಾಣ ಸಹಾಯಕ ಆಯುಕ್ತ ರಮೇಶ ಕೋಲಾರ, ತಹಶೀಲ್ದಾರ್ ಸಾವಿತ್ರಿ ಶರಣು ಸಲಗರ, ತಾಪಂ ಇಒ ಕಿರಣ್ ಪಾಟೀಲ್, ನಗರಸಭೆ ಪೌರಾಯುಕ್ತ ಶಿವಕುಮಾರ, ಸಿಪಿಐ ರಘುವೀರ ಸಿಂಗ್ ಠಾಕೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.