ಚಲಾಯಿಸುವ ಯುವಕರಿಗೆ ಮತದಾನದ ಮಹತ್ವ ತಿಳಿಸಲು ಸಹಾಯಕ ಆಯುಕ್ತ ಜ್ಞಾನೇಂದ್ರಕುಮಾರ ಗಂಗವಾರ ನೇತೃತ್ವದಲ್ಲಿ ವಿವಿಧ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ವಿಭಿನ್ನವಾಗಿ ಮತದಾನ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ.
Advertisement
ಮತದಾನ ಜಾಗೃತಿ ಮೂಡಿಸಲು ನಗರಸಭೆ ಹಾಗೂ ತಾಲೂಕು ಆಡಳಿತ ಸಂಯುಕ್ತಾಶ್ರಯದಲ್ಲಿ 15ರನ್ನು ಜನ ಒಳಗೊಂಡ ಸ್ವೀಪ್ ತಂಡ ರಚಿಸಲಾಗಿದ್ದು, ತಂಡದ ಪ್ರತಿಯೊಬ್ಬರಿಗೂ ನೀಡಿದ ಟೀ ಶರ್ಟ್ ಮೇಲೆ ಮತದಾನ ಮಾಡಿ ಪ್ರಜಾಪ್ರಭುತ್ವ ಬಲಪಡಿಸಿ ಎಂದು ನಮೂದಿಸಲಾಗಿದೆ.
ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಏ.23ರಂದು ತಪ್ಪದೆ ಮತದಾನ ಮಾಡಲು ಹೇಳಬೇಕು ಎಂದು ಮೌಲಾನಾ ಮತ್ತು ಅರ್ಚಕರಿಗೆ ಸೂಚನೆ ನೀಡಲಾಗಿದೆ.
Related Articles
Advertisement
ಇನ್ನು ಲೋಕಸಭೆ ಚುನಾವಣೆ ಮತದಾನಕ್ಕೆ 10 ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಹೋಬಳಿ ಮಟ್ಟದಲ್ಲಿ ಬೈಕ್ ರ್ಯಾಲಿ ಸೇರಿದಂತೆ ವಿವಿಧ ಅಭಿಯಾನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. 14ರಂದು ಜಿಪಂ ಕ್ಷೇತ್ರವಾದ ಕೋಹಿನೂರ ಗ್ರಾಮದಲ್ಲಿ ಕುಸ್ತಿ ಪಂದ್ಯ ಏರ್ಪಡಿಸಲಾಗಿದೆ ಎಂದು ಸಹಾಯಕ ಆಯುಕ್ತ ಜ್ಞಾನೇಂದ್ರ ಕುಮಾರ ಗಂಗವಾರ ತಿಳಿಸಿದ್ದಾರೆ.
ಬಸವಕಲ್ಯಾಣ ತಾಲೂಕಿನಲ್ಲಿ ಕಳೆದ ಲೋಕಸಭೆ ಚುನಾವಣೆಗಿಂತ ಈ ಬಾರಿ ಹೆಚ್ಚು ಸಂಖ್ಯೆಯಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುವ ನಿಟ್ಟಿನಲ್ಲಿ ಹಗಲು ರಾತ್ರಿ ವಿವಿಧ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಇತರರಿಗೆ ಮಾದರಿಯಾಗಿದೆ.
ಪ್ರತಿಬಾರಿ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡುವವರ ಸಂಖ್ಯೆ ಕಡಿಮೆ ಆಗುತ್ತ ಬರುತ್ತಿದೆ. ಆದ್ದರಿಂದ ಈ ವರ್ಷ ಯುವಕರಲ್ಲಿ ಮತ್ತು ಸಾರ್ವಜನಿಕರಲ್ಲಿ ಮತದಾನದ ಮಹತ್ವ ತಿಳಿಸುವ ಉದ್ದೇಶದಿಂದ ನಿತ್ಯ ಮತದಾನದ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ..ಜ್ಞಾನೇಂದ್ರಕುಮಾರ ಗಂಗವಾರ,
ಸಹಾಯಕ ಆಯುಕ್ತ, ಬಸವಕಲ್ಯಾಣ ವೀರಾರೆಡ್ಡಿ ಆರ್.ಎಸ್.