Advertisement

ಬಸವಕಲ್ಯಾಣ ಶಾಸಕ ನಾರಾಯಣ ರಾವ್ ಕೋವಿಡ್ ಸೋಂಕಿಗೆ ಬಲಿ

04:18 PM Sep 24, 2020 | keerthan |

ಬೆಂಗಳೂರು: ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರು ಇಂದು ಸಂಜೆ ನಿಧನರಾಗಿದ್ದಾರೆ.

Advertisement

ಕೋವಿಡ್-19 ಪಾಸಿಟಿವ್ ಹಿನ್ನೆಲೆಯಲ್ಲಿ ನಾರಾಯಣ ರಾವ್ ಅವರು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು  ಬುಧವಾರದಿಂದ ನಾರಾಯಣರಾವ್ ಅವರು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು.

65 ವರ್ಷದ ನಾರಾಯಣ ರಾವ್ ಅವರು ಬಹುಅಂಗಾಂಗ ವೈಫಲ್ಯದಿಂದ ಇಂದು ಸಂಜೆ 3.55ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧಿಸಿದ್ದ ನಾರಾಯಣ ರಾವ್ ಅವರು ಮಲ್ಲಿಕಾರ್ಜುನ ಖೂಬಾ ಅವರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next